Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಖ್ಯಾತ ಪತ್ರಕರ್ತ, ಚಿಂತಕ ವಿ ಟಿ...

ಖ್ಯಾತ ಪತ್ರಕರ್ತ, ಚಿಂತಕ ವಿ ಟಿ ರಾಜಶೇಖರ್ ನಿಧನ

ವಾರ್ತಾಭಾರತಿವಾರ್ತಾಭಾರತಿ20 Nov 2024 9:40 AM IST
share
ಖ್ಯಾತ ಪತ್ರಕರ್ತ, ಚಿಂತಕ ವಿ ಟಿ ರಾಜಶೇಖರ್ ನಿಧನ

ಮಂಗಳೂರು: ಖ್ಯಾತ ಪತ್ರಕರ್ತ, ಲೇಖಕ, ಚಿಂತಕ ಹಾಗು ದಲಿತ್ ವಾಯ್ಸ್ ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ ಅವರು ಬುಧವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಕೆಲವು ವರ್ಷಗಳಿಂದ ಮಂಗಳೂರಿನ ಶಿವಭಾಗ್ ನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದ ಅವರು ಇತ್ತೀಚಿಗೆ ಅಸೌಖ್ಯದಿಂದ ಬಳಲುತ್ತಿದ್ದರು.

ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ಅವರು ಬಳಿಕ ದಲಿತರ ಧ್ವನಿಯಾಗಿ ಕೆಲಸ ಮಾಡಲು 1981 ರಲ್ಲಿ ದಲಿತ್ ವಾಯ್ಸ್ ನಿಯತಕಾಲಿಕ ಪ್ರಾರಂಭಿಸಿದ್ದರು. ದೇಶಾದ್ಯಂತ ದಲಿತ್ ವಾಯ್ಸ್ ಹಾಗು ಅದರಲ್ಲಿ ಪ್ರಕಟಿತ ಅವರ ಬರಹಗಳು ಭಾರೀ ಚರ್ಚೆಗೆ ಕಾರಣವಾಗುತ್ತಿದ್ದವು.

ಮೀಸಲಾತಿ ಹಾಗು ದಲಿತರ ಹಕ್ಕುಗಳ ಪ್ರಬಲ ಪ್ರತಿಪಾದಕರಾಗಿದ್ದ ರಾಜಶೇಖರ್ ಅವರು ಬ್ರಾಹ್ಮಣ್ಯ ಹಾಗು ಸಂಘ ಪರಿವಾರದ ಕಟು ಟೀಕಾಕಾರರಾಗಿದ್ದರು. ಹತ್ತಾರು ಮಹತ್ವದ ಕೃತಿಗಳನ್ನು ರಚಿಸಿರುವ ವಿ ಟಿ ರಾಜಶೇಖರ್ ಅವರು ರಾಷ್ಟ್ರೀಯ, ಅಂತರ್ ರಾಷ್ಟ್ರೀಯ ಪ್ರಶಸ್ತಿ, ಗೌರವಗಳಿಗೆ ಪಾತ್ರರಾಗಿದ್ದಾರೆ.

ರಾಜಶೇಖರ್ ಅವರ ಪತ್ನಿ ಈ ಹಿಂದೆಯೇ ನಿಧನರಾಗಿದ್ದು, ಪುತ್ರ ಸಲೀಲ್ ಶೆಟ್ಟಿ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ರಾಜಶೇಖರ್ ಅವರ ಅಂತಿಮ ಸಂಸ್ಕಾರ ಉಡುಪಿಯ ಓಂತಿಬೆಟ್ಟುವಿನಲ್ಲಿ ಗುರುವಾರ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X