ಇಂದಿನಿಂದ ಕಲ್ಕಟ್ಟ ದಲ್ಲಿ ಸ್ವಲಾತ್ ವಾರ್ಷಿಕೋತ್ಸವ ಕಾರ್ಯಕ್ರಮ
ದೇರಳಕಟ್ಟೆ: ಟಿಐವೈಎ ಹಾಗೂ ಎಸ್ಸೆಸ್ಸೆಫ್ ಕಲ್ಕಟ್ಟ ಇದರ ಆಶ್ರಯದಲ್ಲಿ 25 ನೇ ಸ್ವಲಾತ್ ವಾರ್ಷಿಕೋತ್ಸವದ ಪ್ರಯುಕ್ತ ಬುರ್ದಾ ಮಜ್ಲಿಸ್, ಧಾರ್ಮಿಕ ಉಪನ್ಯಾಸ ಕಾರ್ಯಕ್ರಮವು ಕಲ್ಕಟ್ಟ ಇಲ್ಯಾಸ್ ಜುಮಾ ಮಸೀದಿಯ ಖತೀಬ್ ಇಸ್ಹಾಕ್ ಸಖಾಫಿ ನಂದಾವರ ಅವರ ಅಧ್ಯಕ್ಷತೆಯಲ್ಲಿ ಜ.16 ರಿಂದ 18 ವರೆಗೆ ನಡೆಯಲಿದೆ.
ಜ16 ಗುರುವಾರ ರಾತ್ರಿ ಈ ಕಾರ್ಯಕ್ರಮವನ್ನು ಕಲ್ಕಟ್ಟ ಇಲ್ಯಾಸ್ ಜುಮಾ ಮಸೀದಿಯ ಖತೀಬ್ ಇಸ್ಹಾಕ್ ಸಖಾಫಿ ನಂದಾವರ ಉದ್ಘಾಟಿಸಲಿದ್ದು, ಸಯ್ಯಿದ್ ತ್ವಾಹಾ ತಂಙಳ್ ,ಶಾಹಿನ್ ಬಾಬು ಹಾಗೂ ಸಂಗಡಿಗರಿಂದ ಬುರ್ದಾ ಮಜ್ಲಿಸ್ ನಡೆಯಲಿದೆ.
ಜ.17 ಶುಕ್ರವಾರ ರಾತ್ರಿ ಉಸ್ತಾದ್ ಸಿದ್ದೀಕ್ ಮಹ್ಮೂದಿ ವಿಳೆಯಿಲ್ ಅವರಿಂದ ಧಾರ್ಮಿಕ ಉಪನ್ಯಾಸ ನಡೆಯಲಿದೆ.
ಜ.18 ಶುಕ್ರವಾರ ರಾತ್ರಿ ಸಯ್ಯಿದ್ ಮುಹ್ಸಿನ್ ಸೈದಲವಿ ಕೋಯ ತಂಙಳ್ ಅವರ ನೇತೃತ್ವದಲ್ಲಿ ಸ್ವಲಾತ್ ಮಜ್ಲಿಸ್ , ಹುಸೈನ್ ಅಹ್ಸನಿ ಅಲ್ ಮುಈನಿ ಮಾರ್ನಾಡ್ ಅವರಿಂದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ . ಇಲ್ಯಾಸ್ ಜುಮಾ ಮಸೀದಿ ಅಧ್ಯಕ್ಷ ಮನ್ಸೂರ್ ರಕ್ಷಿದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.