Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೋಚಿಮುಲ್ ಪ್ರಕರಣ: ಮಂಗಳೂರು ವಿವಿ...

ಕೋಚಿಮುಲ್ ಪ್ರಕರಣ: ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರ ಅಮಾನತು, ಕುಲಪತಿ ರಾಜೀನಾಮೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ6 Feb 2024 3:18 PM IST
share

ಮಂಗಳೂರು, ಫೆ.6 ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ(ಕೋಚಿಮುಲ್) ಉದ್ಯೋಗಿಗಳ ನೇಮಕಾತಿ ಪ್ರಕರಣದಲ್ಲಿ ಕೈಜೋಡಿಸಿದ ಮಂಗಳೂರು ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಬೇಕು, ಪರೀಕ್ಷಾಂಗ ಕುಲಸಚಿವರನ್ನು ಅಮಾನತುಗೊಳಿಸಬೇಕು ಹಾಗೂ ಪ್ರಭಾರ ಕುಲಪತಿ ರಾಜಿನಾಮೆ ನೀಡಬೇಕು, ರಾಜ್ಯ ಸರ್ಕಾರ ಕೂಡಲೇ ಕುಲಪತಿಗಳನ್ನು ನೇಮಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಮಂಗಳೂರು ಆಗ್ರಹಿಸಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಭಾವಿಪ ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀರಾಮ್ ಅಂಗೀರಸ, ಗೊಂದಲದ ಗೂಡಾಗಿರುವ ವಿವಿಯಲ್ಲಿ ಶೈಕ್ಷಣಿಕ ಚಟುವಟಿಕೆ ಸುಗಮವಾಗಿ ನಡೆಯಲು ಸರಕಾರ ಗಮನ ಹರಿಸದೇ ಇದ್ದರೆ ಮಂಗಳೂರು ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳನ್ನು ಸೇರಿಸಿ ವಿವಿ ಚಲೋ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಕೋಚಿಮುಲ್ ಅವ್ಯವಹಾರಕ್ಕೆ ಸಂಬಂಧಿಸಿ ಜ.18ರಂದು ಮಂಗಳೂರು ವಿವಿಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯೋಗಿಗಳ ನೇಮಕಾತಿಗೆ ಪ್ರಶ್ನೆಪತ್ರಿಕೆ ಸಿದ್ಧತೆ, ಪರೀಕ್ಷೆ ಹಾಗೂ ಫಲಿತಾಂಶ ಪ್ರಕಟಣೆಯ ಜವಾಬ್ದಾರಿಯನ್ನು ಮಂಗಳೂರು ವಿವಿ ವಹಿಸಿಕೊಂಡಿತ್ತು.

ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ರಾಜು ಚೆಲ್ಲಣ್ಣನವರ್ ನೇಮಕಾತಿ ಪರೀಕ್ಷಾ ಜವಾಬ್ದಾರಿ ವಹಿಸಿಕೊಂಡಿದ್ದರು. ಅವರ ಮೇಲೆ ಪ್ರಶ್ನೆ ಪತ್ರಿಕೆ ಮಾರಾಟ ಆರೋಪ ಇದ್ದು, ಇಡಿ ತಂಡದ ದಾಳಿ ಹಿನ್ನೆಲೆಯಲ್ಲಿ ಪ್ರೊ.ರಾಜು ಚೆಲ್ಲಣ್ಣನವರ್ ಹಾಗೂ ಕುಲಪತಿಗಳನ್ನು ಅಮಾನತುಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ವಿವಿ ಅಧಿಕಾರಿಗಳ ಅಸಮರ್ಪಕ ಕಾರ್ಯನಿರ್ವಹಣೆಯಿಂದ ಪರೀಕ್ಷಾ ನಿರ್ವಹಣೆಯಲ್ಲಿ ಎಡವಿದೆ. ಅನೇಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣ, ವಿದೇಶಿ ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ವಿವಿ ಬಗ್ಗೆ ಇರದ ಆಸಕ್ತಿ ಹೊರಗಿನ ಪರೀಕ್ಷೆ ನಡೆಸಲು ಇರುವುದು ಖೇದಕರ ಎಂದರು.

ಕಳೆದ ಏಳು ತಿಂಗಳಿಂದ ಖಾಯಂ ಕುಲಪತಿಗಳ ನೇಮಕವಾಗಿಲ್ಲ. ಸಿಂಡಿಕೇಟ್ ಸದಸ್ಯರನ್ನು ನೇಮಿಸಲು ಹಾತೊರೆಯುವ ಸರ್ಕಾರ ಕುಲಪತಿ ನೇಮಕದ ವಿಚಾರದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ. ಇದರಿಂದಾಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ಅನಿಶ್ಚಿತತೆ ತಲೆದೋರಿದೆ. ಘಟಿಕೋತ್ಸವ ಸಮೀಪಿಸುತ್ತಿದ್ದು, ಕುಲಪತಿ, ಕುಲಸಚಿವರು ರಜೆಯಲ್ಲಿದ್ದಾರೆ. ಹೀಗಾಗಿ ಮುಖ್ಯ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೂಡಲೇ ಕುಲಪತಿ ನೇಮಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಸುದ್ದಿಗೋಷ್ಟಿಯಲ್ಲಿ ರಾಜ್ಯ ಸಹ ಕಾರ್ಯದರ್ಶಿ ಹರ್ಷಿತ್ ಕೊಯ್ಲ, ಆದಿತ್ಯ, ನಿಶಾನ್ ಆಳ್ವ, ಶ್ರೇಯಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X