ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ: ಮತ್ತೊಬ್ಬ ಆರೋಪಿ ಸೆರೆ

ಮಂಗಳೂರು: ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಕೆ.ಸಿ.ರೋಡ್ ಶಾಖೆಯಲ್ಲಿ ಕಳೆದ ಶುಕ್ರವಾರ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇಂದು ಮತ್ತೊಬ್ಬ ಆರೋಪಿಯನ್ನು ತಮಿಳುನಾಡಿನ ತಿರುವನ್ವೇಲಿಯಲ್ಲಿ ಇಂದು ಬಂಧಿಸಿದ್ದಾರೆ.
ಬಂಧಿತನನ್ನು ಷಣ್ಮುಗ ಸುಂದರಂ (65) ಎಂದು ಗುರುತಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ.
ಪ್ರಕರಣ ಪ್ರಮುಖ ಆರೋಪಿ ಮುರುಗನ್ ಡಿ. ದೇವರ್ ಎಂಬಾತನ ತಂದೆಯಾಗಿರುವ ಷಣ್ಮುಗ ಸುಂದರಂ ದರೋಡೆಕೋರರು ನೀಡಿದ ಚಿನ್ನವನ್ನು ತನ್ನ ಮನೆಯಲ್ಲಿ ಬಚ್ಚಿಟ್ಟಿದ್ದ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸಿ ಮಂಗಳೂರಿಗೆ ಕರೆ ತರುತ್ತಿದ್ದಾರೆ.
ಆರೋಪಿಯಿಂದ 16.250 ಕೆಜಿ ಚಿನ್ನವನ್ನು ವಶಪಡಿಸಲಾಗಿದೆ ಎಂದು ತಿಳಿದುಬಂದಿದೆ.
Next Story