ಕೃಷ್ಣಾಪುರ: ಮೀಫ್ ನಿಂದ ಚೈತನ್ಯ ಪಬ್ಲಿಕ್ ಸ್ಕೂಲ್ ನಲ್ಲಿ ನೀಟ್, ಜೆಇಇ ತರಬೇತಿ ಕಾರ್ಯಾಗಾರ
ಮಂಗಳೂರು, ಜ.1: ಮುಸ್ಲಿಮ್ ಎಜುಕೇಶನಲ್ ಇನ್ ಸ್ಟಿಟ್ಯೂಶನ್ಸ್ ಫೆಡರೇಶನ್ (ಮೀಫ್) ಮತ್ತು ಕೃಷ್ಣಾಪುರದ ಚೈತನ್ಯ ಪಬ್ಲಿಕ್ ಸ್ಕೂಲ್ ನ ಜಂಟಿ ಆಶ್ರಯದಲ್ಲಿ ನೀಟ್, ಜೆಇಇ ತರಬೇತಿ ಕಾರ್ಯಾಗಾರ ಇಂದು ಚೈತನ್ಯ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯಿತು.
ಚೈತನ್ಯ ಪಬ್ಲಿಕ್ ಸ್ಕೂಲ್ ಸಂಚಾಲಕ ಎಂ.ಎ.ಹನೀಫ್ ಸಸಿಗೆ ನೀರುಣಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಮೀಫ್ ಮಾಧ್ಯಮ ಕಾರ್ಯದರ್ಶಿ ಪಿ.ಎ.ಇಲ್ಯಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೀಫ್ ಕನ್ವೀನರ್ ಬಿ.ಎ. ನೀಟ್, ಜೆಇಇ ಪರೀಕ್ಷೆಯ ಪ್ರಾಮುಖ್ಯತೆಯನ್ನು ವಿವರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ YCAL Bahrain ಇದರ ನಿರ್ದೇಶಕ ಸಿನಾನ್ ಝಕರಿಯ ನೀಟ್, ಜೆಇಇ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಚೈತನ್ಯ ಪಬ್ಲಿಕ್ ಸ್ಕೂಲ್ ಪ್ರಧಾನ ಕಾರ್ಯದರ್ಶಿ ಶೇಕ್ ಅಹ್ಮದ್, ಆಡಳಿತ ಸಮಿತಿ ಸದಸ್ಯರಾದ ಬಿ.ಎ.ನಝೀರ್, ಕೆ.ಸಿ.ಮುಹಮ್ಮದ್ ಅಲಿ ಮತ್ತು ಶಿಕ್ಷಕ ರಕ್ಷಕ ಸಮಿತಿಯ ಅಧ್ಯಕ್ಷೆ ತುಳಸಿ ಉಪಸ್ಥಿತರಿದ್ದರು.
ಚೈತನ್ಯ ಪಬ್ಲಿಕ್ ಸ್ಕೂಲ್ ಕೃಷ್ಣಾಪುರ, ಜಾಮಿಯಾ ಆಂಗ್ಲ ಮಾಧ್ಯಮ ಶಾಲೆ ಚೊಕ್ಕಬೆಟ್ಟು ಮತ್ತು ನೂರುಲ್ ಹುದಾ ಆಂಗ್ಲ ಮಾಧ್ಯಮ ಶಾಲೆ ಕಾಟಿಪಳ್ಳದ ಎಸೆಸೆಲ್ಸಿಯ ಒಟ್ಟು 100 ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಾಗಾರದ ಪ್ರಯೋಜನ ಪಡೆದರು.
ಮುಖ್ಯ ಶಿಕ್ಷಕಿ ಶಶಿಕಲಾ ಸ್ವಾಗತಿಸಿದರು. ಶಿಕ್ಷಕಿ ಸುನೀತಾ ಆರ್. ವಂದಿಸಿದರು. ಶಿಕ್ಷಕಿ ಸುಮತಾ ಕಾರ್ಯಕ್ರಮ ನಿರೂಪಿಸಿದರು.