Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಲೋಕಸಭೆ ಚುನಾವಣೆ | ಕರಾವಳಿಯಲ್ಲಿ ಈ ಬಾರಿ...

ಲೋಕಸಭೆ ಚುನಾವಣೆ | ಕರಾವಳಿಯಲ್ಲಿ ಈ ಬಾರಿ ಬದಲಾವಣೆ: ಡಿ.ಕೆ.ಶಿವಕುಮಾರ್

"ಜೆರೋಸಾ ವಿವಾದ: ಪೊಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡಲ್ಲ"

ವಾರ್ತಾಭಾರತಿವಾರ್ತಾಭಾರತಿ17 Feb 2024 1:52 PM IST
share
ಲೋಕಸಭೆ ಚುನಾವಣೆ | ಕರಾವಳಿಯಲ್ಲಿ ಈ ಬಾರಿ ಬದಲಾವಣೆ: ಡಿ.ಕೆ.ಶಿವಕುಮಾರ್

ಮಂಗಳೂರು, ಫೆ.17: ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟುಗಳು ಕುಸಿದಿವೆ. ಇಲ್ಲಿ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಆದ್ದರಿಂದ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಭಾಗದ ಜನ ಬದಲಾವಣೆ ಮಾಡುವ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ್ದ ಡಿ.ಕೆ.ಶಿವಕುಮಾರ್, ಕಾರ್ಯಕರ್ತರ ಸಮಾವೇಶ ಮಂಗಳೂರಿನಲ್ಲಿ ನಡೆಸುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು.

ರಾಜಕೀಯದಲ್ಲಿ ಯಾವುದೂ ಶಾಶ್ವತವಿಲ್ಲ. ಅಸಾಧ್ಯ ಎಂಬುದಿಲ್ಲ. ರಾಜಕಾರಣ ಎಂದರೆ ಸಾಧ್ಯತೆಗಳ ಕಲೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜನ ಇಲ್ಲಿ ಬದಲಾವಣೆ ಮಾಡಲಿದ್ದಾರೆ ಎಂಬ ನಂಬಿಕೆ ಇದೆ. ಈ ಭಾಗದಲ್ಲಿ ನಿರುದ್ಯೋಗದ ಸಮಸ್ಯೆ ಇದೆ. ಇಲ್ಲಿ ಪಾಸಾಗುವ ಯುವಕರು ಮತ್ತು ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಬೆಂಗಳೂರು, ಮುಂಬೈ, ಸೌದಿಗೆ ಹೋಗುತ್ತಿದ್ದಾರೆ.

ಈ ಭಾಗದಲ್ಲಿ ಶಾಂತಿ ಕದಡಲಾಗುತ್ತಿದೆ. ಈ ಭಾಗದಲ್ಲಿ ಅನೇಕ ಮೆಡಿಕಲ್, ಇಂಜಿನಿಯರ್ ಕಾಲೇಜುಗಳಿವೆ. ಅನೇಕ ಮಕ್ಕಳು ಇಲ್ಲಿ ಬಿಜೆಪಿಯ ಧರ್ಮದ ಬಲೆಗೆ ಬಿದ್ದು ಶಿಕ್ಷಣದಿಂದ ದೂರ ಉಳಿಯುತ್ತಿದ್ದಾರೆ. ಬಿಜೆಪಿ ಅಭಿವೃದ್ಧಿ ವಿಚಾರ ಬಿಟ್ಟು ಭಾವನಾತ್ಮಕ ವಿಚಾರವನ್ನು ಮುಂದಿಡುತ್ತಿದೆ. ಅದಕ್ಕಾಗಿ ನಾವು ನಮ್ಮ ಪ್ರಣಾಳಿಕೆಯಲ್ಲಿ ಹೊಸ ಆಲೋಚನೆ ಮಾಡುವುದಾಗಿ ಹೇಳಿದ್ದೆವು. ನಿನ್ನೆಯ ಬಜೆಟ್ ನಲ್ಲೂ ಮೀನುಗಾರರು ಹಾಗೂ ಕರಾವಳಿ ಭಾಗದಲ್ಲಿ ಹೊಸ ನೀತಿ ತರಲು ಘೋಷಣೆ ಮಾಡಿದ್ದೇವೆ. ಈ ವಿಚಾರವಾಗಿ ಸಲಹೆ ಕೇಳಲಾಗಿದೆ. ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಬೇಕಾಗಿದೆ. ಸಂಜೆ 7 ಗಂಟೆ ನಂತರ ಈ ಭಾಗದ ಪ್ರದೇಶದಲ್ಲಿ ಜನ ಓಡಾಟ ಕಡಿಮೆ ಮಾಡಿದ್ದಾರೆ. ವ್ಯಾಪಾರ ವಹಿವಾಟು ಕುಂಠಿತವಾಗಿದೆ. ವ್ಯಾಪಾರ ವಹಿವಾಟು ಆದಾಗಲೇ ಜನಕ್ಕೆ ಉದ್ಯೋಗ ಸಿಗುತ್ತದೆ. ಈ ಭಾಗದ ಬ್ಯಾಂಕುಗಳನ್ನು ಉತ್ತರ ಭಾರತದ ಬ್ಯಾಂಕುಗಳ ಜತೆ ವಿಲೀನ ಮಾಡಲಾಗುತ್ತಿದೆ. ಇವೆಲ್ಲದರ ಬಗ್ಗೆ ನಾವು ಗಂಭೀರವಾಗಿ ಗಮನಹರಿಸಬೇಕು ಎಂದರು.

ರಾಜ್ಯದ ಅನ್ಯಾಯಕ್ಕೆ ಏಕೆ ಧ್ವನಿ ಎತ್ತಲ್ಲ?

ದಕ್ಷಿಣ ಕನ್ನಡ ಭಾಗದ ತೆರಿಗೆ ನಮಗೆ ಬೇಕು ಎಂಬ ಶಾಸಕ ಹರೀಶ್ ಪೂಂಜಾ ಹೇಳಿಕೆಗೆ ಪ್ರತಿಕ್ರಿಯಿಸಿ, ನಮ್ಮ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಹೇಳಿದಾಗ ಅವರು ಧ್ವನಿ ಎತ್ತಲಿಲ್ಲ. ಮುಸ್ಲಿಮರಿಗೆ ಶೇ.1ರಷ್ಟು ಅನುದಾನವನ್ನೂ ನೀಡಬಾರದೇ? ಬಿಜೆಪಿಯವರು ರಾಜಕಾರಣ ಮಾಡಲಿಕ್ಕೆ ಈ ರೀತಿ ಹೇಳುತ್ತಾರೆ ಎಂದರು.

ಡಿಕೆ.ಸುರೇಶ್ ವಿರುದ್ಧ ಕುಮಾರಸ್ವಾಮಿ ಸ್ಪರ್ಧಿಸಿದರೂ ಸ್ವಾಗತ

ಡಿ.ಕೆ.ಸುರೇಶ್ ವಿರುದ್ಧ ಮೈತ್ರಿ ಅಭ್ಯರ್ಥಿಯಾಗಿ ಡಾ. ಮಂಜುನಾಥ್ ಅವರನ್ನು ನಿಲ್ಲಿಸಲು ಚರ್ಚೆ ನಡೆಯುತ್ತಿರುವ ಬಗ್ಗೆ ಕೇಳಿದಾಗ, ನಾನು ದೇವೇಗೌಡರ ವಿರುದ್ಧ ಸ್ಪರ್ಧೆ ಮಾಡಿದ್ದೆ. ಕುಮಾರಸ್ವಾಮಿಯವರ ವಿರುದ್ಧವೂ ಸ್ಪರ್ಧಿಸಿದ್ದೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಕುಮಾರಸ್ವಾಮಿ ಅವರ ಧರ್ಮಪತ್ನಿ ಅವರನ್ನು ನಿಲ್ಲಿಸಿದಾಗ ಅವರ ವಿರುದ್ಧ ನನ್ನ ತಮ್ಮ ಸ್ಪರ್ಧೆ ಮಾಡಿದ್ದರು. ಆಗಲೂ 1.35 ಲಕ್ಷ ಮತಗಳಿಂದ ಗೆದ್ದಿದ್ದೆವು. ಅವರು ಯಾರನ್ನಾದರೂ ನಿಲ್ಲಿಸಲಿ. ನಮಗೆ ನಮ್ಮ ಮತದಾರರಿದ್ದಾರೆ.

ಸುರೇಶ್ ಅವರು ದಿಲ್ಲಿಯಲ್ಲಿ ಕೂರುವ ಸಂಸದರಲ್ಲ. ಅವರು ಹಳ್ಳಿಯಲ್ಲಿ ಕೂರುವ ಸಂಸದರು. ಅವರು ಮತದಾರರ ಮನಸ್ಸಿನಲ್ಲಿ ಉತ್ತಮ ಕೆಲಸಗಾರ ಎಂಬ ಭಾವನೆ ಮೂಡಿಸಿದ್ದಾರೆ. ನಮ್ಮ ಕ್ಷೇತ್ರದಿಂದ ದೇವೇಗೌಡರು, ಕುಮಾರಸ್ವಾಮಿ ಅವರೂ ಸೇರಿದಂತೆ ಅನೇಕ ಬೇರೆ ಸಂಸದರೂ ಆಯ್ಕೆಯಾಗಿದ್ದರು. ಅವರಿಗೂ ಸುರೇಶ್ ರಿಗೂ ಏನು ವ್ಯತ್ಯಾಸವಿದೆ ಎಂದು ಜನ ನೋಡಿದ್ದಾರೆ. ಪ್ರತಿ ಹಳ್ಳಿ, ಪ್ರತಿ ಪಂಚಾಯ್ತಿ, ಪ್ರತಿ ರಸ್ತೆ, ಪ್ರತಿ ಮನೆ ಸುರೇಶ್ ಅವರ ಕೆಲಸ ನೋಡಿದೆ. ಇಂದು ಆ ಭಾಗದಲ್ಲಿ ಕೆರೆಗಳು ತುಂಬಿ ಅಂತರ್ಜಲ ಹೆಚ್ಚಳವಾಗಿದ್ದರೆ, ಬಡವರಿಗೆ ಮನೆ, ನಿವೇಶನ ನೀಡಿದ್ದರೆ, ನರೇಗಾದಲ್ಲಿ ಹಣ ಬಂದಿದ್ದರೆ ಅದು ಸುರೇಶ್ ಅವರ ಕೊಡುಗೆ ಇದೆ. ಮತದಾರರು ಪ್ರಜ್ಞಾವಂತರು. ಅವರು ಯಾರನ್ನೇ ನಿಲ್ಲಿಸಿದರೂ ಮತದಾರರು ಉತ್ತರ ಕೊಡುತ್ತಾರೆ.

ನನ್ನ ವಿರುದ್ಧ ಚಕ್ರವರ್ತಿ ಅಶೋಕ್ ಕೂಡ ಸ್ಪರ್ಧಿಸಿದ್ದರು. ರಾಜಕಾರಣ ಎಂದರೆ ಜನ ತೀರ್ಮಾನ ಮಾಡುತ್ತಾರೆ. ನಾವು ಯಾಕೆ ಚಿಂತಿಸಬೇಕು. ಕುಮಾರಸ್ವಾಮಿ ಬಂದು ನಿಂತರೂ ನಾವು ಸ್ವಾಗತಿಸುತ್ತೇವೆ ಎಂದು ತಿಳಿಸಿದರು.

ಲೋಕಸಭೆ ಅಭ್ಯರ್ಥಿ ಆಯ್ಕೆ ಕುರಿತಾದ ಪ್ರಶ್ನೆಗೆ, ಈಗಾಗಲೇ ಮೂರ್ನಾಲ್ಕು ಬಾರಿ ಚರ್ಚೆ ಮಾಡಿದ್ದು, ಮತ್ತೊಂದು ಸುತ್ತಿನ ಸಮೀಕ್ಷೆ ನಡೆಯುತ್ತಿದೆ. ಎಲ್ಲ ಮುಗಿದ ನಂತರ ಅಭ್ಯರ್ಥಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ಜೆರೋಸಾ ವಿವಾದ: ಪೊಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡಲ್ಲ

ಜೆರೋಸಾ ಶಾಲೆ ವಿವಾದದಲ್ಲಿ ಶಾಸಕರ ವಿರುದ್ಧದ ಪ್ರಕರಣ ಹಿಂಪಡೆಯದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂಬ ಬಿಜೆಪಿ ಹೇಳಿಕೆ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಡಿಕೆಶಿ, ಅವರು ಮಾಡುತ್ತಿರಲಿ. ಕಾನೂನಿನ ಪ್ರಕಾರ ಕ್ರಮ ವಹಿಸಲಾಗುತ್ತದೆ. ಪೊಲೀಸರು ಅವರ ಕೆಲಸ ಮಾಡುತ್ತಾರೆ. ನಾನು ಅವರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X