ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಪ್ರಕರಣ: ಆರೋಪಿ ವಸಂತ ಕೃಷ್ಣ ಶೇರಿಗಾರಗೆ ಜೈಲು ಶಿಕ್ಷೆ
ಮಂಗಳೂರು, ಆ.20: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಕರೆ ಮಾಡಿದ್ದ ಆರೋಪಿಗೆ ಮಂಗಳೂರಿನ 6ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಪೂಜಾಶ್ರೀ ಒಂದು ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಕಾರ್ಕಳ ತಾಲೂಕಿನ ಮುದ್ರಾಡಿಯ ವಸಂತ ಕೃಷ್ಣ ಶೇರಿಗಾರ ಎಂಬಾತ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬೆದರಿಕೆ ಕರೆ ಮಾಡಿದ್ದ. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸರಕಾರಿ ಅಭಿಯೋಜಕ ಮೋಹನ್ ಕುಮಾರ್ ಬಿ. ಸಾಕ್ಷಿಗಳ ವಿಚಾರಣೆ ನಡೆಸಿದ್ದರು. ಸಹಾಯಕ ಸರಕಾರಿ ಅಭಿಯೋಜಕ ಜನಾರ್ದನ್ ಸಾಕ್ಷಿಗಳ ವಿಚಾರಣೆ ನಡೆಸಿ ಸರಕಾರದ ಪರವಾಗಿ ವಾದ ಮಂಡಿಸಿದ್ದರು.
Next Story