ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ಜಾಲ; ಮತ್ತೋರ್ವ ಆರೋಪಿ ಸೆರೆ
ಸಂದೀಪ್ ಪೈ
ಮಂಗಳೂರು, ಅ.15: ಕ್ರಿಕೆಟ್ ಬೆಟ್ಟಿಂಗ್ ಜಾಲದ ಮತ್ತೊಬ್ಬ ಆರೋಪಿ ಕಾವೂರು ಗಾಂಧಿನಗರದ ಸಂದೀಪ್ ಪೈ (44) ಎಂಬಾತನನ್ನು ಕಾವೂರು ಪೊಲೀಸರು ರವಿವಾರ ಬಂಧಿಸಿದ್ದಾರೆ.
ಆರೋಪಿಯು ಮೊಬೈಲ್ ಆ್ಯಪ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ಎನ್ನಲಾಗಿದೆ.
ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
Next Story