ಮಂಗಳೂರು | ಕಂದಾಯ ಸಚಿವರಿಂದ ದ.ಕ. ಜಿಲ್ಲಾಧಿಕಾರಿಯ ನೂತನ ಕಚೇರಿ ಕಾಮಗಾರಿ ಪರಿಶೀಲನೆ
ಮಂಗಳೂರು, ಆ.29: ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇಂದು ಬೆಳಗ್ಗೆ ಮಂಗಳೂರು ನಗರದ ಹೊರವಲಯ ಪಡೀಲ್ ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿಯವರ ಕಚೇರಿ ಕಟ್ಟಡದ ಕಾಮಗಾರಿಗಳನ್ನು ಪರಿಶೀಲಿಸಿ, ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟೀರಿಯ, ಕಂದಾಯ ಇಲಾಖೆಯ ಆಯುಕ್ತ ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story