ಮಂಗಳೂರು: ದುಬೈಯಿಂದ ಹಾರ್ಲಿಕ್ಸ್ ಬಾಟಲಿ, ಬೆಡ್ ಶೀಟ್ ನಲ್ಲಿ ಬಚ್ಚಿಟ್ಟು ತರುತ್ತಿದ್ದ ಚಿನ್ನ ವಶ
ಸಾಂದರ್ಭಿಕ ಚಿತ್ರ (Photo: PTI)
ಮಂಗಳೂರು, ಫೆ.1: ದುಬೈಯಿಂದ ಅಕ್ರಮವಾಗಿ ತರುತ್ತಿದ್ದ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ದುಬೈನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ಮೂಲಕ ಮಂಗಳೂರಿಗೆ ಬಂದಿಳಿದ ಕಾಸರಗೋಡು ಮೂಲದ ವ್ಯಕ್ತಿಯನ್ನು ಅಧಿಕಾರಿಗಳು ತಪಾಸಣೆ ನಡೆಸಿದಾಗ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುವುದು ಬೆಳಕಿಗೆ ಬಂದಿದೆ. ಆರೋಪಿಯಿಂದ 11.16 ಲಕ್ಷ ರೂ. ಮೌಲ್ಯದ 179 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಚಿನ್ನವನ್ನು ಪೇಸ್ಟ್ ರೂಪದಲ್ಲಿ ಬೆಡ್ ಶೀಟ್, ದಿಂಬಿನ ಕವರ್, ಹಾರ್ಲಿಕ್ಸ್ ಬಾಟಲಿಯಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story