ಮಂಗಳೂರು: ಅ. 31ರಂದು ಉದ್ಯೋಗ ಮೇಳ
ಮಂಗಳೂರು,ಅ.30: ನಗರದ ಕಾರ್ಸ್ಟ್ರೀಟ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಿಸ್ಟ್ ಆಫ್ ಇಂಡಿಯಾ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಅಕ್ಟೋಬರ್ 31ರಂದು ಬೆಳಗ್ಗೆ 9 ಗಂಟೆಯಿಂದ ಹಮ್ಮಿಕೊಳ್ಳಲಾಗಿದೆ.
ಶಾಸಕರಾದ ವೇದವ್ಯಾಸ್ ಕಾಮತ್ ಕಾರ್ಯಕ್ರಮ ಉದ್ಘಾಟಿಸುವರು.
30 ಬೇರೆ ಬೇರೆ ನೇಮಕಾತಿ ಕಂಪೆನಿಗಳ ಪ್ರತಿನಿಧಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ಪಿಯುಸಿ, ಡಿಪ್ಲೋಮಾ, ಐಟಿಐ, ಇಂಜಿನಿಯರಿಂಗ್ ಸೇರಿದಂತೆ ಯಾವುದೇ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಪಡೆದಿರುವ ಉದ್ಯೋಗ ಆಕಾಂಕ್ಷಿಗಳು ತಮ್ಮ ವಿದ್ಯಾರ್ಹತೆಯ ದಾಖಲೆಗಳ ಪ್ರತಿಯೊಂದಿಗೆ ಸಂದರ್ಶನಕ್ಕೆ ನೊಂದಣಿ ಮಾಡಿಕೊಂಡು ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಕಚೇರಿ ದೂರವಾಣಿ ಸಂಖ್ಯೆ 0824-2491073 ಅಥವಾ ಉದ್ಯೋಗ ಮಾಹಿತಿ ಕೋಶ ಸಂಚಾಲಕಿ ಡಾ.ಮಾಲತಿ ಕೆ. ಮೊ.ಸಂಖ್ಯೆ: 9844041089 ಸಂಪರ್ಕಿಸುವಂತೆ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story