ಮಂಗಳೂರು: ವಿಕಸಿತ ಭಾರತ ಯಾತ್ರೆಗೆ ಚಾಲನೆ
ಮಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೂ ತಲುಪಿಸುವಲ್ಲಿ ನೆರವಾಗಿರುವ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಶುಕ್ರವಾರ ಉಳಾಯಿಬೆಟ್ಟು ಗ್ರಾಪಂನಲ್ಲಿ ಚಾಲನೆ ನೀಡಲಾಯಿತು.
ಸಂಸದ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕಿ ಕವಿತಾ ಶೆಟ್ಟಿ ಮಾತನಾಡಿ ಕೇಂದ್ರ ಸರಕಾರದ ಯೋಜನೆಗಳಿಂದ ವಂಚಿತರಾಗಿರುವ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ 2024ರ ಜನವರಿ 18ರವರೆಗೆ ಜಿಲ್ಲೆಯಲ್ಲಿ ಸಮರ್ಪಕವಾಗಿ ಕೈಗೊಳ್ಳಲಾಗುತ್ತದೆ. ಯಾತ್ರೆಯು ಜಿಲ್ಲೆಯ ಗ್ರಾಪಂ ಮಟ್ಟದಲ್ಲಿ ಯೋಜನೆಗಳ ಕುರಿತು ಸೂಕ್ತ ಮಾಹಿತಿ ನೀಡಲಾಗುತ್ತಿದೆ ಎಂದರು.
ಕೆನರಾ ಬ್ಯಾಂಕಿನ ಜನರಲ್ ಮೇನೆಜರ್ ಸುಧಾಕರ ಕೊಟ್ಟಾರಿ, ಯುನಿಯನ್ ಬ್ಯಾಂಕ್ ಡಿಜಿಎಂ ಮುಹಮ್ಮದ್ ಸಯ್ಯದ್ , ಉಳಾಯಿಬೆಟ್ಟು ಗ್ರಾಪಂ ಆಧ್ಯಕ್ಷ ಹರಿಕೇಶ್ ಶೆಟ್ಟಿ, ಉಪಾಧ್ಯಕ್ಷ ದಿನೇಶ್ ,ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ ಮತ್ತಿತರರು ಉಪಸ್ಥಿತರಿದ್ದರು.
ಕೆನರಾ ಬ್ಯಾಂಕಿನ ಜನರಲ್ ಮ್ಯಾನೇಜರ್ ಸುಧಾಕರ ಕೊಟ್ಟಾರಿ ಮತ್ತಿತರರು ಉಪಸ್ಥಿತರಿದ್ದರು.