ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ; ಆರೋಪಿ ಸೆರೆ
ಮಂಗಳೂರು, ಜು.29: ಬಾಲಕಿಯನ್ನು ಅತ್ಯಾಚಾರ ಮಾಡಿ ಆಕೆ ಗರ್ಭ ಧರಿಸಲು ಕಾರಣನಾದ ಆರೋಪಿ ಉಳ್ಳಾಲ ಪೇಟೆಯ ಶಾಫಿ ಎಂಬಾತನನ್ನು ಮಂಗಳೂರಿನ ಮಹಿಳಾ ಪೊಲೀಸರು ಮತ್ತು ಉಳ್ಳಾಲ ಪೊಲೀಸರು ಶನಿವಾರ ಬಂಧಿಸಿದ್ದಾರೆ.
8ನೇ ತರಗತಿಯಲ್ಲಿ ಕಲಿಯುತ್ತಿರುವ 12 ವರ್ಷ 10 ತಿಂಗಳು ಪ್ರಾಯದ ಬಾಲಕಿಯನ್ನು ಆರೋಪಿಯು ಹಲವು ಬಾರಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಿ ಮಹಿಳಾ ಠಾಣೆಗೆ ಜುಲೈ 15ರಂದು ದೂರು ನೀಡಲಾಗಿತ್ತು. ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಶನಿವಾರ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಮಂಗಳೂರು ಮಹಿಳಾ ಠಾಣೆಯ ನಿರೀಕ್ಷಕ ಲೋಕೇಶ್ ಎ.ಸಿ. ತನಿಖೆ ನಡೆಸುತ್ತಿದ್ದಾರೆ.
Next Story