ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಮಂಗಳೂರು, ನ.9: ನಗರದ ಬಂದರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣದಲ್ಲಿ ಭಾಗಿಯಾಗಿ ಸುಮಾರು 13 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಕುತ್ತಾರ್ ನಿವಾಸಿ ಹನೀಫ್ ಯಾನೆ ಗುಜರಿ ಹನೀಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ಇರುವಿಕೆಯ ಬಗ್ಗೆ ಮಾಹಿತಿ ಕಲೆ ಹಾಕಿದ ಬಂದರ್ ಇನ್ಸ್ಪೆಕ್ಟರ್ ಅಜ್ಮತ್ ಅಲಿ ನೇತೃತ್ವದ ತಂಡ ಗುರುವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
Next Story