ಮಂಗಳೂರು: ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಆರೋಪಿ ಸೆರೆ
ಸಿಸಿಬಿ ಪೊಲೀಸರ ಕಾರ್ಯಾಚರಣೆ
ಮಂಗಳೂರು, ಡಿ.17: ನಗರದ ಕಂಕನಾಡಿ ಬಳಿ ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ರವಿವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಜೇಶ್ವರದ ಆಬುಪಡ್ಪು ನಿವಾಸಿ ಪ್ರಶ್ವಿತ್ (25) ಎಂದು ಗುರುತಿಸಲಾಗಿದೆ.
ಆರೋಪಿಯು 500 ರೂ., 200 ರೂ., 100 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು, ಈವರೆಗೆ ಸುಮಾರು 8 ರಿಂದ 9 ಸಾವಿರ ರೂ. ಖೋಟಾ ನೋಟುಗಳನ್ನು ಚಲಾವಣೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿಯಿಂದ 500 ರೂ. ಮುಖಬೆಲೆಯ 3 ನೋಟುಗಳು, 200 ರೂ. ಮುಖಬೆಲೆಯ 2 ನೋಟುಗಳು, 100 ರೂ. ಮುಖ ಬೆಲೆಯ 3 ನೋಟುಗಳು ಹಾಗೂ 10 ಸಾವಿರ ರೂ. ಅಂದಾಜು ಮೌಲ್ಯದ ಮೊಬೈಲ್ ಫೋನ್ ಹಾಗೂ 4250 ರೂ. ಅಸಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story