Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿವಿ ಗಣೇಶೋತ್ಸವ ವಿವಾದ;...

ಮಂಗಳೂರು ವಿವಿ ಗಣೇಶೋತ್ಸವ ವಿವಾದ; ಹೊರಗಿನವರ ಹಸ್ತಕ್ಷೇಪ ಸರಿಯಲ್ಲ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ11 Sept 2023 4:00 PM IST
share
ಮಂಗಳೂರು ವಿವಿ ಗಣೇಶೋತ್ಸವ ವಿವಾದ; ಹೊರಗಿನವರ ಹಸ್ತಕ್ಷೇಪ ಸರಿಯಲ್ಲ: ದಿನೇಶ್ ಗುಂಡೂರಾವ್

ಮಂಗಳೂರು, ಸೆ. 11: ಮಂಗಳೂರು ವಿಶ್ವವಿದ್ಯಾನಿಲಯ ಈಗಾಗಲೇ ಬಿ. ಗ್ರೇಡ್‌ಗೆ ಹೋಗಿದೆ. ಅದನ್ನು ಎ ಗ್ರೇಡ್‌ಗೆ ತರಲು ಅಗತ್ಯ ಕ್ರಮಗಳನ್ನ ನಾವು ಮೊದಲು ಮಾಡಬೇಕಾಗಿದೆ. ವಿವಿ ಸ್ವಾಯತ್ತ ಸಂಸ್ಥೆ. ಅವರ ಆಡಳಿತ ಮಂಡಳಿ ಹಂತದಲ್ಲೇ ಅದನ್ನು ಬಗೆಹರಿಸಬೇಕೇ ಹೊರತು ಅದಕ್ಕೆ ಹೊರಗಿನವರ ಹಸ್ತಕ್ಷೇಪ ಸರಿಯಲ್ಲ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು,ಮಂಗಳೂರು ವಿಶ್ವವಿದ್ಯಾನಿಲಯದ ವಿಸಿ ಹಾಗೂ ರಾಜ್ಯಪಾಲರು ಅದರ ಬಗ್ಗೆ ತೀರ್ಮಾನ ಮಾಡುತ್ತಾರೆ. ಕಲ್ಲಡ್ಕ ಪ್ರಭಾಕರ ಭಟ್ ಏನು ಮಾತನಾಡುತ್ತಾರೋ ಅದು ನಮಗೆ ಸಂಬಂಧಿಸಿದ್ದಲ್ಲ. ವಿವಿ ಶೈಕ್ಷಣಿಕವಾಗಿ ಬೆಳೆಯಬೇಕು. ಅಭಿವೃದ್ಧಿಯಾಗಬೇಕು. ಅನಗತ್ಯ ವಿಚಾರಗ ಬಗ್ಗೆ ಹೊರಗಿನವರು ಯಾಕೆ ಮಾತನಾಡಬೇಕು ಎಂದು ಪ್ರಶ್ನಿಸಿದರು.

ಕಳೆದ 40 ವರ್ಷಗಳಿಂದ ಅಲ್ಲಿ ಗಣೇಶೋತ್ಸವ ಆಚರಿಸುತ್ತಾರೆಂಬ ಮಾಹಿತಿ ಇದೆ. ಈಗ ಯಾಕೆ ವಿವಾದ ಮಾಡಲಾಗುತ್ತಿದೆ ಎಂದು ಅರ್ಥವಾಗುತ್ತಿಲ್ಲ. ವಿವಿ ಹಣ ಸಾರ್ವಜನಿಕರದ್ದು, ಅದು ಶಿಕ್ಷಣಕ್ಕೆ ಬಳಕೆ ಆಗಬೇಕು. ಕೆಲವರಿಗೆ ವೇತನ, ನಿವೃತ್ತಿ ವೇತನ ನೀಡಿಲ್ಲ. ಅವೆಲ್ಲಾ ಮೊದಲು ಸರಿ ಆಗಲಿ. ಹಬ್ಬ ಆಚರಣೆ ವಿವಿ ವಿವೇಚನೆಗೆ ಬಿಟ್ಟಿದ್ದು. ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ಮುಖ್ಯ ಚುನಾವಣೆ ಹತ್ತಿರ ಬಂದಾಗ ಈ ರೀತಿ ಅಶಾಂತಿ ಸೃಷ್ಟಿಸುವುದನ್ನು ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.

ಬಿ.ಕೆ. ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಗ್ಗೆ ಹೇಳಿದ್ದಾರೆನ್ನಲಾದ ಆಕ್ಷೇಪದ ಮಾತುಗಳ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್, ಪ್ರಬುದ್ಧ ರಾಜಕಾರಣಿಯೊಬ್ಬರು ಈ ರೀತಿ ಮಾತನಾಡಬಾರದು. ಸಾರ್ವಜನಿಕ ವೇದಿಕೆಯಲ್ಲಿ ಈ ತೆರನಾದ ಹೇಳಿಕ ಸಮಂಜಸವಲ್ಲ. ಬಿಲ್ಲವ ಈಡಿಗರು ಸೇರಿದಂತೆ ಯಾರನ್ನೂ ಕಡೆಗಣಿಸುವ ಪ್ರಶ್ನೆಯೇ ಕಾಂಗ್ರೆಸ್‌ನಲ್ಲಿ ಇಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X