ಶನಿವಾರ ಮಂಗಳೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ; ಡ್ರೋನ್ ಹಾರಾಟ ನಿಷೇಧ
ಮಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಶನಿವಾರ ನಗರದಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಹಾಗೂ ವಾಮಂಜೂರಿನ ತಿರುವೈಲ್ನಲ್ಲಿ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಲಿದ್ದಾರೆ.
ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಫೆ.17ರ ಬೆಳಗ್ಗೆ 8ರಿಂದ ರಾತ್ರಿ 8 ರವರೆಗೆ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದ ಸುತ್ತಮುತ್ತ ಐದು ಕಿಲೋ ಮೀಟರ್ ವ್ಯಾಪ್ತಿಯನ್ನು ಹಾಗೂ ವಾಮಂಜೂರಿನ ತಿರುವೈಲಿನಲ್ಲಿ ನಡೆಯಲಿರುವ ಕಂಬಳ ಕಾರ್ಯಕ್ರಮದ ಸುತ್ತಮುತ್ತ 5 ಕಿ.ಮೀ ವ್ಯಾಪ್ತಿಯನ್ನು ತಾತ್ಕಾಲಿಕವಾಗಿ ರೆಡ್ಜೋನ್ ಎಂದು ಪರಿಗಣಿಸಿ ಆ ಪ್ರದೇಶದಲ್ಲಿ ಯಾವುದೇ ಮಾದರಿಯ ಡ್ರೋನ್ ಹಾರಾಟ, ಬಳಕೆ ಮತ್ತು ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಆದೇಶಿಸಿದ್ದಾರೆ.
Next Story