Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಎ.21ರಿಂದ ಕಸ ವಿಂಗಡಿಸಿ...

ಮಂಗಳೂರು | ಎ.21ರಿಂದ ಕಸ ವಿಂಗಡಿಸಿ ನೀಡದಿದ್ದರೆ ದಂಡ : ಪಾಲಿಕೆ ಆಯುಕ್ತ

ವಾರ್ತಾಭಾರತಿವಾರ್ತಾಭಾರತಿ16 April 2025 1:35 PM IST
share
ಮಂಗಳೂರು | ಎ.21ರಿಂದ ಕಸ ವಿಂಗಡಿಸಿ ನೀಡದಿದ್ದರೆ ದಂಡ : ಪಾಲಿಕೆ ಆಯುಕ್ತ

ಮಂಗಳೂರು : ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಹಸಿ ಹಾಗೂ ಒಣ ತ್ಯಾಜ್ಯವನ್ನು ವಿಂಗಡನೆ ಮಾಡಿ ನೀಡುವಂತೆ ಸೂಚನೆ ನೀಡಲಾಗಿದೆ. ಅದಾಗ್ಯೂ ಅದನ್ನು ಪಾಲಿಸಲಾಗುತ್ತಿಲ್ಲ. ಆದ್ದರಿಂದ ಎ.21ರಿಂದ ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ನೀಡದೆ ಇದ್ದರೆ ದಂಡ ವಿಧಿಸಲಾಗುವುದು. ಆರಂಭಿಕವಾಗಿ 500 ರೂ.ನಿಂದ 15 ಸಾವಿರ ರೂ.ವರೆಗೂ ದಂಡ ವಿಧಿಸಲಾಗುವುದು ಎಂದು ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪೌರ ಕಾರ್ಮಿಕರ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅವರೂ ದಂಡ ವಿಧಿಸುವ ಎಚ್ಚರಿಕೆ ನೀಡಿದ್ದಾರೆ.

ಮನೆಗಳಿಂದ ಹಸಿ, ಒಣ ಹಾಗೂ ಸ್ಯಾನಿಟರಿ ಎಂಬಂತೆ ಪ್ರತ್ಯೇಕವಾಗಿ ತ್ಯಾಜ್ಯ ವಿಂಗಡಿಸಿ ಸಂಗ್ರಹಿಸಲಾಗುತ್ತದೆ. ಇದರ ಉಲ್ಲಂಘನೆ ಕಂಡು ಬಂದಲ್ಲಿ ಮನೆಯ ಎದುರು ಅಳವಡಿಸಿದ ಕ್ಯೂ ಆರ್ ಕೋಡ್ ಮೂಲಕ ಫೋಟೋ ಸ್ಕ್ಯಾನ್ ಮಾಡಿ ಪಾಲಿಕೆ ಗಮನಕ್ಕೆ ತರಬೇಕು. ಇದರ ಆಧಾರದಲ್ಲಿ ವಿಂಗಡನೆ ಮಾಡದೆ ನೀಡುವವರ ಮೇಲೆ ದಂಡ ವಿಧಿಸಲಾಗುವುದು ಎಂದು ತುಳಸಿ ಮದ್ದಿನೇನಿ ತಿಳಿಸಿದ್ದಾರೆ.

ನಗರದಲ್ಲಿ ಪ್ರತಿನಿತ್ಯ 200 ಮೆಟ್ರಿಕ್ ಟನ್ ಕಸ ಸಂಗ್ರಹವಾಗುತ್ತದೆ. ಎ.21ರಿಂದ ಹಸಿ ಕಸ, ಒಣಕಸ ಹಾಗೂ ಸ್ಯಾನಿಟರಿ ಕಸವನ್ನು ಪ್ರತ್ಯೇಕವಾಗಿ ನೀಡದಿದ್ದರೆ ದಂಡ ವಿಧಿಸಲಾಗುವುದು. ಆರಂಭದಲ್ಲಿ ಹಣದ ಮೂಲಕ ದಂಡ ಸಂಗ್ರಹಿಸಲಾಗುತ್ತದೆ. ಮತ್ತೆಯೂ ತ್ಯಾಜ್ಯ ಪ್ರತ್ಯೇಕಿಸಿ ನೀಡದಿದ್ದರೆ ನೀರಿನ ಸಂಪರ್ಕ ಕಡಿತಗೊಳಿಸಲಾಗುವುದು. ಮನೆಗಳಿಗೆ ನೀಡಲಾಗಿದ್ದ ಕ್ಯೂಆರ್ ಕೋಡ್ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ಕಾರ್ಮಿಕರಿಗೆ ನೀಡಿದ ಡಿವೈಸ್‌ಗಳು ಸರಿಯಾಗಿಲ್ಲ ಈ ಕಾರಣದಿಂದ ಮೊಬೈಲ್ ಆ್ಯಪ್ ಮೂಲಕ ಸ್ಕ್ಯಾನ್ ಮಾಡಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಪ್ರಸಕ್ತ 90 ಸಾವಿರ ಸ್ಥಳಗಳಲ್ಲಿ ಕೋಡ್ ಇದೆ ಅವುಗಳಲ್ಲಿ ಸ್ಕ್ಯಾನ್ ಮಾಬೇಕು. ಜತೆಗೆ ನಗರದ ಬ್ಲಾಕ ಸ್ಟಾಪ್‌ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಕ್ರಮ ವಹಿಸಲಾಗುತ್ತದೆ ಎಂದು ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ತಿಳಿಸಿದ್ದಾರೆ.

ತ್ಯಾಜ್ಯ ವಿಂಗಡನೆ ಸಂದರ್ಭದಲ್ಲಿ ಕಸದ ಜತೆ ಪ್ಯಾಂಪರ್ಸ್, ಡೈಪರ್ಸ್ ಸೇರಿಸಿ ನೀಡಲಾಗುತ್ತದೆ. ಅವುಗಳನ್ನು ಪ್ರತ್ಯೇಕಿಸಿ ನೀಡಬೇಕಿದೆ. ಕಾರ್ಮಿಕರು ಅವುಗಳನ್ನು ಬಿಚ್ಚಿ ಕೈಹಾಕಿ ನೋಡಬೇಕಾದ ಅನಿವಾರ್ಯತೆ ಇದೆ ಎಂದು ಪೌರ ಕಾರ್ಮಿಕರೊಬ್ಬರು ಸಭೆಯ ಗಮನ ಸೆಳೆದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಪ್ರತಿಕ್ರಿಯಿಸಿ, ಕಸ ಸಂಗ್ರಹದ ವೇಳೆ ಫೋಟೋ ತೆಗೆದುಕೊಳ್ಳಿ. ಪ್ರತ್ಯೇಕಿಸದೆ ನೀಡಿದ್ದಲ್ಲಿ ಇಲಾಖೆ ಗಮನಕ್ಕೆ ತಂದು ಇಲಾಖೆಯ ಮೂಲಕ ಹಾಗೂ ಸ್ವಯಂ ಸೇವಕರ ಮೂಲಕ ಅವರಿಗೆ ತಿಳುವಳಿಕೆ ಮೂಡಿಸಲಾಗುವುದು. ಮತ್ತೆಯೂ ಎಚ್ಚೆತ್ತುಕೊಳ್ಳದಿದ್ದರೆ ಪಾಲಿಕೆ ಕ್ರಮ ವಹಿಸಲಿದೆ ಎಂದರು.

ಪ್ಯಾಂಪಸ್, ಡೈಪರ್ಸ್‌ಗಳನ್ನು ಯಾವುದೇ ಕಾರಣಕ್ಕೂ ಹಸಿ ಕಸದೊಂದಿಗೆ ನೀಡುವಂತಿಲ್ಲ. ಮನೆಯವರು ಅವುಗಳನ್ನು ಪ್ರತ್ಯೇಕವಾಗಿಯೇ ನೀಡಬೇಕು ಎಂದು ತುಳಸಿ ಮದ್ದಿನೇನಿ ಹೇಳಿದರು. ಪ್ರತಿನಿತ್ಯ ಕಸ ವಿಗಡಿಸಿ ಸಂಗ್ರಹ ಮಾಡುವುದು ಕಡ್ಡಾಯವಾಗಿದ್ದು, ಸ್ಕ್ಯಾನ್ ಮತ್ತು ಪೋಟೋ ತೆಗೆಯಬೇಕು. ಕನಿಷ್ಟ ಶೇ.80ರಷ್ಟು ಕಾರ್ಯ ನಿರ್ವಹಿಸುವ ಪೌರ ಕಾರ್ಮಿಕರಿಗೆ ಮಾಸಿಕ 500 ರೂ. ಭತ್ಯೆ ನೀಡಲಾಗುವುದು ಎಂದು ತುಳಸಿ ಮದ್ದಿನೇನಿ ಹೇಳಿದರು.

ಅಧಿಕಾರಿಗಳು ಪ್ರತಿ ವಾಹನಗಳನ್ನು ಗಮನಿಸಬೇಕು. ಮನೆಯಿಂದ ಸಂಗ್ರಹವಾಗುವ ಬಳಿಕ ಪ್ರತ್ಯೇಕವಾಗಿಯೇ ಕಾಂಪ್ಯಾಕ್ಟರ್ ಮೂಲಕ ರವಾನಿಸುವ ವ್ಯವಸ್ಥೆ ನಡೆಯಬೇಕು. ಸೀಯಾಳದ ಚಿಪ್ಪುಗಳನ್ನು ಹಸಿ ಕಸದೊಂದಿಗೆ ಸಂಗ್ರಹಿಸಬೇಕು. ದ.ಕ. ಜಿಲ್ಲೆಯಲ್ಲಿ ಮಲೇರಿಯಾ ಅಧಿಕವಾಗಿದ್ದು, ಎಳನೀರಿನ ಚಿಪ್ಪು ಮನೆಗಳಲ್ಲಿ ಇರಿಸಿದ್ದಲ್ಲಿ ಸೊಳ್ಳೆ ಉತ್ಪತ್ತಿಗೆ ಕಾರಣವಾಗುತ್ತದೆ. ಯಾವುದೇ ಕಾರಣಕ್ಕೂ ಅವುಗಳನ್ನು ಮನೆಗಳಲ್ಲಿ ಇಡುವಂತಿಲ್ಲ ಎಂದು ತುಳಸಿ ಮದ್ದಿನೇನಿ ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X