Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ತ್ಯಾಜ್ಯ ವಿಂಗಡನೆ ಪರಿಶೀಲನೆ;...

ಮಂಗಳೂರು: ತ್ಯಾಜ್ಯ ವಿಂಗಡನೆ ಪರಿಶೀಲನೆ; ಅಂಬೇಡ್ಕರ್ ವೃತ್ತದ ಸುತ್ತ ಮುತ್ತಲಿನ ಹೊಟೇಲ್‌ಗಳಿಗೆ ದಾಳಿ

ನಿಯಮ ಪಾಲಿಸದವರಿಗೆ ದಂಡ ವಿಧಿಸಿದ ಪಾಲಿಕೆ ಆಯುಕ್ತ

ವಾರ್ತಾಭಾರತಿವಾರ್ತಾಭಾರತಿ22 April 2025 1:30 PM IST
share

ಮಂಗಳೂರು, ಎ. 22: ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಸುತ್ತಮುತ್ತಲಿನ ಹೊಟೇಲ್‌ಗಳಿಗೆ ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿ, ಸಿಬ್ಬಂದಿ ತ್ಯಾಜ್ಯ ವಿಂಗಡನೆಗೆ ಸಂಬಂಧಿಸಿ ನಿರ್ಲಕ್ಷ್ಯ ವಹಿಸುತ್ತಿರುವರಿಗೆ ದಂಡ ವಿಧಿಸಿದೆ.

ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್ ಅವರ ನೇತೃತ್ವದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಜತೆ ದಿಢೀರ್ ಭೇಟಿ ನೀಡಿ ನಿಯಮ ಪಾಲಿಸದ ಹೊಟೇಲ್‌ಗವರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿದರು.

ಮನೆಗಳು, ಹೊಟೇಲ್‌ಗಳು, ಅಪಾರ್ಟ್‌ಮೆಂಟ್ ಸೇರಿದಂತೆ ತ್ಯಾಜ್ಯ ಉತ್ಪತ್ತಿಯಾಗುವಲ್ಲಿ ಹಸಿ, ಒಣ ಹಾಗೂ ಸ್ಯಾನಿಟರಿ ಪ್ಯಾಡ್‌ಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ನೀಡುವಂತೆ ಈಗಾಗಲೇ ಪಾಲಿಕೆಯಿಂದ ಸೂಚನೆ ನೀಡಲಾಗಿದೆ. ಸೂಚನೆ ಪಾಲನೆಯಾಗುತ್ತಿರುವ ಕುರಿತಂತೆ ಇಂದು ನಗರದ ಕುಡ್ಲ ಕ್ವಾಲಿಟಿ ರೆಸ್ಟೋರೆಂಟ್, ಫುಡ್ ಜಂಕ್ಷನ್, ಸಮಕ್ ಡೈನ್, ಕೈರಲಿ ಸೇರಿದಂತೆ ಕೆಲ ಹೊಟೇಲ್‌ಗಳಿಗೆ ಭೇಟಿ ನೀಡಿ ತ್ಯಾಜ್ಯ ವಿಂಗಡನೆಯಾಗುತ್ತಿರುವ ಕುರಿತಂತೆ ಪಾಲಿಕೆ ಆಯುಕ್ತರು ಪರಿಶೀಲನೆ ನಡೆಸಿದರು.

ನಾಲ್ಕು ಹೊಟೇಲ್‌ಗಳ ಭೇಟಿಯ ವೇಳೆ ತ್ಯಾಜ್ಯ ವಿಂಗಡನೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಹಿನ್ನೆಲೆಯಲ್ಲಿ ತಲಾ 5,000 ರೂ.ನಂತೆ ದಂಡ ವಿಧಿಸಲಾಗಿದೆ.

ಸಾರ್ವಜನಿಕರು ಸೇರಿದಂತೆ ತ್ಯಾಜ್ಯ ಉತ್ಪತ್ತಿಯಾಗುವ ಇತರ ಎಲ್ಲಾ ಸ್ಥಳಗಳಿಂದ ಹಸಿ, ಒಣ ಹಾಗೂ ಸ್ಯಾನಿಟರಿ ಪ್ಯಾಡ್‌ಗಳನ್ನು ಪ್ರತ್ಯೇಕವಾಗಿ ವಿಂಗಡಿಸಿಯೇ ವಾಹನದಲ್ಲಿ ಬರುವ ಪೌರ ಕಾರ್ಮಿಕರಿಗೆ ಒದಗಿಸಬೇಕು. ಈ ಬಗ್ಗೆ ಈಗಾಗಲೇ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ. ಈ ನಿಟ್ಟಿನಲ್ಲಿ ಇಂದು ನಗರದ ಅಂಬೇಡ್ಕರ್ ವೃತ್ತ ಸಮೀಪದ ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿದ್ದು, ತ್ಯಾಜ್ಯ ವಿಂಗಡನೆಯಲ್ಲಿ ಸೂಚನೆ ಪಾಲಿಸದವರಿಗೆ ತಲಾ 5 ಸಾವಿರ ರೂ. ದಂಡ ವಿಧಿಸಲಾಗಿದೆ. ಒಟ್ಟು 20000 ರೂ. ದಂಡ ಸಂಗ್ರಹಿಸಲಾಗಿದೆ. ತ್ಯಾಜ್ಯ ವಿಂಗಡನೆಯ ಅಗತ್ಯತೆ ಬಗ್ಗೆಯೂ ಈ ಸಂದರ್ಭ ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್‌ರವರು ಜಾಗೃತಿಯನ್ನು ಮೂಡಿಸಿದರು.

‘ತ್ಯಾಜ್ಯ ವಿಂಗಡನೆಯಲ್ಲಿ ಮುಂದೆಯೂ ಈಗಾಗಲೇ ದಂಡ ವಿಧಿಸಿರುವ ಸಂಸ್ಥೆಗಳವರು ನಿರ್ಲಕ್ಷ್ಯ ವಹಿಸಿದರೆ ದಂಡದ ಮೊತ್ತವನ್ನು ಹೆಚ್ಚಿಸಲಾಗುವುದು. ಈ ದಿಢೀರ್ ಭೇಟಿ ಪಾಲಿಕೆಯ ಇತರ ವಾರ್ಡ್‌ಗಳಲ್ಲಿಯೂ ನಿರಂತರವಾಗಿ ಮುಂದುವರಿಯಲಿದೆ. ಸಾರ್ವಜನಿಕರು ಹಾಗೂ ಸಂಬಂಧಪಟ್ಟವರು ಈ ಬಗ್ಗೆ ಸಹಕರಿಸಬೇಕು. ತ್ಯಾಜ್ಯ ವಿಂಗಡನೆ ಮಾಡಿಯೇ ವಿಲೇವಾರಿಗೆ ನೀಡಬೇಕು’ ಎಂದು ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್ ತಿಳಿಸಿದ್ದಾರೆ.

ನಿಷೇಧಿತ ಪ್ಲಾಸ್ಟಿಕ್ ಬಳಕೆಗೂ ದಂಡ

ಸುರತ್ಕಲ್ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಕುರಿತಂತೆಯೂ ವಲಯ ಆಯುಕ್ತರು ಭೇಟಿ ನೀಡಿ ಪರಿಶೀಲಿಸಿ ದಂಡ ವಿಧಿಸಿದರು. ಮಂಗಳವಾರ ಈ ಸಂಬಂಧ ನಡೆಸಲಾದ ದಾಳಿಯಲ್ಲಿ ಒಟ್ಟು 3500 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಪಾಲಿಕೆ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X