ಸ್ಕೇಟಿಂಗ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಮಾಣಿ ಬಾಲವಿಕಾಸದ ಚಿಂತನ್
ಬಂಟ್ವಾಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಸೆಪ್ಟೆಂಬರ್ 12 ರಂದು ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿ ಮಂಗಳೂರಿನಲ್ಲಿ ನಡೆದ 14 ರ ವಯೋಮಾನದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಚಿಂತನ್ 1000 ಮೀಟರ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸ್ಕೇಟಿಂಗ್ ಸ್ಪರ್ಧೆಯ 500 ಮೀಟರ್ ವಿಭಾಗದಲ್ಲಿಯೂ ದ್ವಿತೀಯ ಸ್ಥಾನ ಪಡೆದಿರುವ ಈತ ಬಾಳ್ತಿಲ ನಿವಾಸಿ ಲೋಕೇಶ್ ಮತ್ತು ರೇಖಾ ದಂಪತಿಗಳ ಪುತ್ರ.
Next Story