ಮೊಂಟೆಪದವು: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಕಳ್ಳತನ
ಮಂಗಳೂರು: ನಗರದ ಹೊರ ವಲಯದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮೊಂಟೆಪದವಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಕಳ್ಳತನ ನಡೆದಿರುವ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಶಾಲೆಯ ಹೈಸ್ಕೂಲ್ ಕಟ್ಟಡದಲ್ಲಿರುವ ಕಾಲೇಜು ವಿಭಾಗದ ಕೊಠಡಿಯ ಹಿಂಬದಿಯ ಕಿಟಕಿಯ ಕಬ್ಬಿಣದ ಸರಳನ್ನು ಮುರಿದು ಹಾಗೂ ಕಾಲೇಜು ಕಟ್ಟಡದ ಮುಂಭಾಗದ ಬಾಗಿಲನ್ನು ಮುರಿದು ಕಳ್ಳರು ಒಳ ನುಗ್ಗಿದ್ದಾರೆ ಎನ್ನಲಾಗಿದೆ.
ಶಾಲಾ ದಾಖಲೆಯ ಕಡತಗಳನ್ನು ಚೆಲ್ಲಾ ಪಿಲ್ಲಿ ಮಾಡಿ ನಗದು ಹಾಗೂ ಶಾಲೆಯ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕೊಣಾಜೆ ಪೊಲೀಸರಿಗೆ ದೂರು ನೀಡಲಾಗಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು, ಬೆರಳಚ್ಚು ತಜ್ಞರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
Next Story