Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂಡುಬಿದಿರೆ: ಆಳ್ವಾಸ್ ನಲ್ಲಿ 75ನೇ...

ಮೂಡುಬಿದಿರೆ: ಆಳ್ವಾಸ್ ನಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ; 30 ಸಾವಿರಕ್ಕೂ ಅಧಿಕ ಮಂದಿ ಭಾಗಿ

ಆಳ್ವಾಸ್ ಆವರಣವೇ ಮಿನಿ ಭಾರತ: ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ26 Jan 2024 4:08 PM IST
share
ಮೂಡುಬಿದಿರೆ: ಆಳ್ವಾಸ್ ನಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ; 30 ಸಾವಿರಕ್ಕೂ ಅಧಿಕ ಮಂದಿ ಭಾಗಿ

ಮೂಡಬಿದ್ರೆ, ಜ.26: ಭಾರತದ ಸಂಸ್ಕೃತಿಯ ಸಾರವನ್ನು ನಾವು ಕರ್ನಾಟಕದಲ್ಲಿ ಕಾಣಬಹುದು. ಆದರೆ, ಕರ್ನಾಟಕದ ಸಾಂಸ್ಕೃತಿಕ ಸಾರವನ್ನು ನಾವೆಲ್ಲ ಆಳ್ವಾಸ್‌ನಲ್ಲಿ ನೋಡಬೇಕು. ಆಳ್ವಾಸ್ ನಮ್ಮ ಸಂಸ್ಕೃತಿ ಬಿಂಬಿಸುವ ಮಿನಿ ಭಾರತ ಎಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಶ್ಲಾಘಿಸಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿ ಆವರಣದ ವನಜಾಕ್ಷಿ ಶ್ರೀಪತಿ ಭಟ್ ವೇದಿಕೆಯಲ್ಲಿ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ಸಂದರ್ಭ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ರೈತರು, ಶೋಷಿತರು, ಬಡವರು ಸೇರಿದಂತೆ ದೇಶದ ಧ್ವನಿ ರಹಿತರೆಲ್ಲ ಇಷ್ಟೊಂದು ಧೈರ್ಯದಿಂದ ಈ ದೇಶದಲ್ಲಿ ಜೀವಿಸಲು ಕಾರಣವೇ ಡಾ.ಬಿ.ಆರ್. ಅಂಬೇಡ್ಕರ್ ಪ್ರಣೀತ ಸಂವಿಧಾನ. ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ ಸ್ವಾತಂತ್ರ್ಯ ಬಂತು. ಅಂಬೇಡ್ಕರ್ ನೇತೃತ್ವದಲ್ಲಿ ಸಂವಿಧಾನ ರಚನೆಯಾಯಿತು. ದೇಶದ ಏಕತೆಯನ್ನು ಸಂವಿಧಾನ ಉಳಿಸಿದೆ. ಪ್ರತಿ ಭಾರತೀಯನೂ ಈ ಸಂವಿಧಾನದ ಇತಿಹಾಸ, ಅರ್ಥ ತಿಳಿದುಕೊಳ್ಳಬೇಕು ಎಂದರು.

ವಂದೇ ಮಾತರಂ ಗಾಯನದ ಬಳಿಕ ಧ್ವಜಾರೋಹಣ ನಡೆಯಿತು. ಬಳಿಕ ರಾಷ್ಟ್ರಗೀತೆ ಹಾಡಲಾಯಿತು. ಬಳಿಕ ಕೋಟಿ ಕಂಠೋಂಸೇ ನಿಖ್‌ಲೇ ಹಾಡಿಗೆ ಸೇರಿದ್ದ 30 ಸಾವಿರಕ್ಕೂ ಅಧಿಕ ಮಂದಿ ಪುಟಾಣಿ ಧ್ವಜಗಳನ್ನು ಬೀಸುತ್ತಾ ದನಿಗೂಡಿಸಿದರು.

ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರಿಗೆ ಎನ್‌ಸಿಸಿ ಸೀನಿಯರ್ ಅಂಡರ್ ಆಫೀಸರ್ ಇಂದ್ರೇಶ್ ಗೌಡ ನೇತೃತ್ವದಲ್ಲಿ ಗೌರವ ರಕ್ಷೆ ನೀಡಲಾಯಿತು. ಬಳಿಕ ಎನ್‌ಸಿಸಿ ಸೀನಿಯರ್ ಅಂಡರ್ ಆಫೀಸರ್ ಹರ್ಷಾರೆಡ್ಡಿ ನೇತೃತ್ವದಲ್ಲಿ ಗೌರವ ವಂದನೆ ನೀಡಲಾಯಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಮಾಜಿ ಸಚಿವರಾದ ಪಿಪಿ.ಜಿ.ಆರ್. ಸಿಂಧ್ಯಾ, ನಾಗರಾಜ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡ, ಸುಮಾರು 250ಕ್ಕೂ ಅಧಿಕ ಮಾಜಿ ಸೈನಿಕರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X