ಮುಲ್ಕಿ: ಪ್ರತ್ಯೇಕ ಪ್ರಕರಣ; ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರ ಬಂಧನ
ಮುಲ್ಕಿ, ಸೆ.11: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ಸೇದುತ್ತಿದ್ದ ಇಬ್ಬರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಬಪ್ಪನಾಡು ಶಾಂಭವಿ ಸೇತುವೆ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಮುಹಮ್ಮದ್ ಶಾಹೀನ್ ಎಂಬಾತನನ್ನು ವಶಕ್ಕೆ ಪಡೆದು ಬಳಿಕ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆತ ಗಾಂಜಾ ಸೇವನೆ ಮಡಿರುವುದ ದೃಡಪಟ್ಟ ಹಿನ್ನೆಲೆಯಲ್ಲಿ ಆತನ ವಿರುದ್ಧ ಪ್ರಕರಣ ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಬಪ್ಪನಾಡು ಗ್ರಾಮದ ಕೊಳಚೆಕಂಬಳ ಎಂಬಲ್ಲಿ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇದುತ್ತಿದ್ದ ಶರತ್ ಪಿ. ಎಂಬಾತನನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಆತ ಗಾಂಜಾ ಸೇವನೆ ಮಾಡಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರ ವಿರುದ್ಧ ಎನ್.ಡಿ.ಪಿ.ಎಸ್. ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story