ನಾಟೆಕಲ್: ಬಸ್- ಮೆಡಿಕಲ್ ಕಾಲೇಜು ವಾಹನ ಢಿಕ್ಕಿ; ಹಲವರಿಗೆ ಗಾಯ
ಉಳ್ಳಾಲ: ರೂಟ್ ಬಸ್ ಮತ್ತು ಮೆಡಿಕಲ್ ಕಾಲೇಜು ಬಸ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಗಾಯಗೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಬಳಿ ಸೋಮವಾರ ನಡೆದಿದೆ.
ಪುತ್ತೂರಿನಿಂದ ಮಂಜನಾಡಿ ರಸ್ತೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ಶಿವಶಂಕರ್ ಬಸ್ ಮತ್ತು ಯೇನಪೋಯ ಮೆಡಿಕಲ್ ಕಾಲೇಜಿನ ಬಸ್ ಪರಸ್ಪರ ಢಿಕ್ಕಿ ಹೊಡೆದಿದೆ.
ಢಿಕ್ಕಿ ಹೊಡೆದ ರಭಸಕ್ಕೆ ಎರಡು ವಾಹನಗಳಿಗೂ ಹಾನಿಯಾಗಿದೆ. ಘಟನೆಯಿಂದ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಘಟನಾ ಸ್ಥಳಕ್ಕೆ ದಕ್ಷಿಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪುತ್ತೂರಿನಿಂದ ಮಂಜನಾಡಿ ರಸ್ತೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ಶಿವಶಂಕರ್ ಬಸ್ ಮತ್ತು ಯೇನಪೋಯ ಮೆಡಿಕಲ್ ಕಾಲೇಜಿನ ಬಸ್ ಪರಸ್ಪರ ಢಿಕ್ಕಿ ಹೊಡೆದಿದೆ. ಎರಡು ವಾಹನಗಳಿಗೂ ಹಾನಿಯಾಗಿದೆ. pic.twitter.com/SJgvYRcuVW
— Jafar Swadiq (@JafarSwadiq3) June 3, 2024
ವಾರ್ತಾ ಭಾರತಿ ವಾಟ್ಸ್ ಆ್ಯಪ್ ಚಾನೆಲ್ ಗೆ ಸೇರಲು https://whatsapp.com/channel/0029VaA8ju86LwHn9OQpEq28 ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.