ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿಯಿಂದ ಯು.ಟಿ.ಖಾದರ್ ರಿಗೆ ಸನ್ಮಾನ
ಉಳ್ಳಾಲ, ಸೆ.28: ವೀರ ರಾಣಿ ಅಬ್ಬಕ್ಕಳ ಚರಿತ್ತೆ ಎಲ್ಲಾ ಕಡೆ ಪ್ರಸರಿಸಲು ಅಬ್ಬಕ್ಕ ಉತ್ಸವ ಸಮಿತಿ ಕೊಡುಗೆ ಅಪಾರ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಸೌತ್ ಕೆನರಾ ಫೋಟೋ ಗ್ರಾಫರ್ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಕುತ್ತಾರ್ ವೆಜಿನೇಷನ್ ನಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.
ನರಿಂಗಾನ ಗ್ರಾಮದಲ್ಲಿ ಐದು ಎಕರೆ ಜಾಗದಲ್ಲಿ ತುಳುಗ್ರಾಮ ಮಾಡಿ ಪ್ರವಾಸಿ ಕೇಂದ್ರ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದರು
ಮಾಜಿ ಶಾಸಕ ಜಯರಾಮ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು
ಈ ಸಂದರ್ಭದಲ್ಲಿ ವೀರ ರಾಣಿ ಅಬ್ಬಕ್ಕ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರು ಇಡಬೇಕು ಎಂದು ಒತ್ತಾಯಿಸಿ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಸ್ಥಳೀಯ ಶಾಸಕರು ಆಗಿರುವ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಅಧ್ಯಕ್ಷ ಪ್ರವೀಣ್, ನಗರಸಭೆ ಪೌರಾಯುಕ್ತ ವಾಣಿ ಆಳ್ವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಅಬ್ಬಕ್ಕ ಉತ್ಸವ ಸಮಿತಿಯ ಗೌರವಾಧ್ಯಕ್ಷ ಸದಾನಂದ ಬಂಗೇರ, ಅಧ್ಯಕ್ಷ ದಿನಕರ್ ಉಳ್ಳಾಲ, ಕೋಶಾಧಿಕಾರಿ ಆನಂದ ಅಸೈಗೋಳಿ, ಸದಸ್ಯರಾದ ಧನಲಕ್ಷ್ಮಿ ಗಟ್ಟಿ, ದೇವಕಿ, ಉಳ್ಳಾಲ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ್ ಕೊಣಾಜೆ ಉಪಸ್ಥಿತರಿದ್ದರು.
ದಿನಕರ್ ಉಳ್ಳಾಲ ಸ್ವಾಗತಿಸಿದರು