ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ಘಟಕದಿಂದ ಮನವಿ
ಮಂಗಳೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದ ವತಿಯಿಂದ ಮಂಗಳೂರು ಪೊಲೀಸ್ ಕಮಿಷನರ್ಗೆ ಮನವಿ ಸಲ್ಲಿಸಲಾಯಿತು.
ಕಲ್ಲಡ್ಕ ಭಟ್ರ ಸಾರ್ವಜನಿಕ ಭಾಷಣಕ್ಕೆ ನಿರ್ಬಂಧ ಹೇರಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
ನಿಯೋಗದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ನಗರ ಸಂಚಾಲಕಿ ಸುಮಯ್ಯ ಹಮೀದುಲ್ಲಾಹ್, ಉಪ ಸಂಚಾಲಕಿ ಶಹೀದಾ ಉಮರ್ ಹಾಗೂ ಅನುಪಮಾ ಮಾಸಿಕದ ಸಂಪಾದಕಿ ಶಹನಾಝ್ ಎಂ. ಉಪಸ್ಥಿತರಿದ್ದರು.
Next Story