ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ರಾಜ್ಯ ಮಹಿಳಾ ಮತ್ತು ಮಾನವ ಹಕ್ಕುಗಳ ಆಯೋಗಕ್ಕೆ ವಿಮ್ ದೂರು
ಮಂಗಳೂರು, ಜ.10: ಮುಸ್ಲಿಂ ಮಹಿಳೆಯರ ಬಗ್ಗೆ ಅಪಮಾನಕರ, ಅಸಂವಿಧಾನಿಕ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರತಿಭಟಿಸಲು ಅನುಮತಿ ಪಡೆಯಲು ಮುಂದಾದ ವಿಮ್ ಸಂಘಟನೆಯ ಪದಾಧಿಕಾರಿಗಳ ಮೇಲೆ ಸೆ.107ರಡಿ ಪ್ರಕರಣ ದಾಖಲಿಸಿರುವ ಬಂಟ್ವಾಳ ನಗರ ಪೊಲೀಸರ ವಿರುದ್ಧ ರಾಜ್ಯ ಮಹಿಳಾ ಆಯೋಗ ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ವಿಮೆನ್ ಇಂಡಿಯ ಮೂವ್ಮೆಂಟ್ ರಾಜ್ಯ ಸಮಿತಿಯು ದೂರು ನೀಡಿವೆ.
ಮುಸ್ಲಿಂ ಮಹಿಳೆಯರ ಬಗ್ಗೆ ಅಶ್ಲೀಲ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳ ಬೇಕೆಂದು ಒತ್ತಾಯಿಸಿದೆ. ಅಲ್ಲದೆ ಸೆ.107ರಡಿ ಪ್ರಕರಣ ದಾಖಲಿಸಿ ನೋಟಿಸ್ ಜಾರಿಗೊಳಿಸಿದ ಪೊಲೀಸರ ವಿರುದ್ಧವೂ ಕ್ರಮಕ್ಕೆ ಆಗ್ರಹಿಸಿದೆ.
ಈ ಸಂದರ್ಭ ರಾಜ್ಯ ಉಪಾಧ್ಯಕ್ಷೆ ಶಾಝಿಯಾ ಬೆಂಗಳೂರು, ರಾಜ್ಯ ಸಮಿತಿ ಸದಸ್ಯೆ ಸಾನಿಯಾ ಮೈಸೂರು, ಬೆಂಗಳೂರು ಜಿಲ್ಲಾಧ್ಯಕ್ಷೆ ಸುಮಯ್ಯಾ,ಕಾರ್ಯದರ್ಶಿ ಆಯಿಶಾ,ಜಿಲ್ಲಾ ಸಮಿತಿ ಸದಸ್ಯೆ ಆಯಿಶಾ ಸಯೀದಾ ಉಪಸ್ಥಿತರಿದ್ದರು.
Next Story