ಮೊಡಂಕಾಪು: ರೈಲ್ವೆ ಬ್ರಿಡ್ಜ್ ಅಡಿಯಲ್ಲಿ ಸಿಲುಕಿದ ರೋಲರ್ ಸಾಗಾಟದ ಲಾರಿ
ಬಂಟ್ವಾಳ, ಫೆ.13: ರೋಲರ್ ವಾಹನವನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ರೈಲ್ವೆ ಓವರ್ ಬ್ರಿಡ್ಜ್ ಅಡಿಭಾಗದಲ್ಲಿ ಘನ ವಾಹನಗಳ ಸಂಚಾರ ನಿರ್ಬಂಧಿಸಲು ಅಳವಡಿಸಿದ್ದ ಕಬ್ಬಿಣದ ಗೇಟ್ ನಲ್ಲಿ ಸಿಲುಕಿಕೊಂಡ ಘಟನೆ ಬಿ.ಸಿ.ರೋಡ್ - ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಇದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.
ಖಾಸಗಿ ಗುತ್ತಿಗೆ ಸಂಸ್ಥೆಗೆ ಸೇರಿದ ರೋಲರ್ ನ್ನು ಬೆಂಜನಪದವು ಸೈಟ್ ನಿಂದ ಪುತ್ತೂರಿನ ಸವಣೂರು ಎಂಬಲ್ಲಿ ನಡೆಯಲಿರುವ ಕಾಮಗಾರಿಗಾಗಿ ಕೊಂಡೊಯ್ಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ರೋಲರ್ ಸಿಲುಕಿದ್ದರಿಂದ ರೈಲ್ವೆ ಇಲಾಖೆ ಗೆ ಸೇರಿದ ಕಬ್ಬಿಣದ ರಾಡ್ ತುಂಡಾಗಿ ಲಾರಿಯ ಮೇಲೆ ಬಿದ್ದಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಕ್ರೇನ್ ಬಳಸಿ ಲಾರಿಯನ್ನು ಬದಿಗೆ ಸರಿಸಿ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
Next Story