ಬರಕಾ ಪಿಯು ಕಾಲೇಜಿಗೆ ನೂರು ಶೇ. ಫಲಿತಾಂಶ
ಮಂಗಳೂರು, ಎ.11: ಪ್ರಸಕ್ತ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅಡ್ಯಾರ್ ಸಮೀಪದ ಬರಕಾ ಪದವಿ ಪೂರ್ವ ಕಾಲೇಜು ಶೇ. 100 ಫಲಿತಾಂಶ ದಾಖಲಿಸಿದೆ.
ಕಾಲೇಜಿನಿಂದ ಒಟ್ಟು 173 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 52 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದರೆ, 110 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 11 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಮಹಮ್ಮದ್ ಅಶ್ರಫ್ ಬಜ್ಪೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story