ಉಪ್ಪಿನಂಗಡಿ: ಯುವಕನಿಗೆ ಚೂರಿ ಇರಿತ; ಪ್ರಕರಣ ದಾಖಲು
ಉಪ್ಪಿನಂಗಡಿ: ಕಾರಿನಲ್ಲಿ ಬಂದ ತಂಡವೊಂದು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಬಿಳಿಯೂರು ಗ್ರಾಮದ ಕರ್ವೇಲು ಬಳಿ ಎ.12ರಂದು ನಡೆದಿದೆ.
ಕರ್ವೇಲು ಜನತಾ ಕಾಲನಿ ನಿವಾಸಿ ಹಕೀಂ (34) ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದವರು. ಹಕೀಂ ಅವರು ಕರ್ವೇಲು ಜಂಕ್ಷನ್ ಬಳಿ ನಿಂತಿದ್ದ ವೇಳೆ ಅಲ್ಲಿಗೆ ಕಾರಿನಲ್ಲಿ ಬಂದ ತಂಡ ಚೂರಿಯಿಂದ ಇರಿದು ಪರಾರಿಯಾಗಿರುವುದಾಗಿ ದೂರಲಾಗಿದೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story