ಲಂಚ ಸ್ವೀಕಾರ ಪ್ರಕರಣ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ಜಾಮೀನು ನಿರಾಕರಣೆ
ಮಂಗಳೂರು: ಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಇಬ್ಬರು ಅಧಿಕಾರಿಗಳಿಗೆ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ಸೆ.19ರಂದು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ.ಆರ್ ಸ್ವಾಮಿ ಮತ್ತು ಕಿರಿಯ ಅಭಿಯಂತರ ನಾಗರಾಜು ಅವರನ್ನು ಲಂಚ ಸ್ವೀಕಾರದ ಆರೋಪದ ಮೇಲೆ ಬಂಧಿಸಲಾಗಿತ್ತು.
ಆರೋಪಿಗಳು ಜಾಮೀನಿಗೆ ಸಲ್ಲಿಸಿದ್ದ ಅರ್ಜಿಯನ್ನು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯದ ನ್ಯಾಯಾಧೀಶೆ ಸಂಧ್ಯಾ ಎಸ್. ತಿರಸ್ಕರಿಸಿದ್ದಾರೆ. ಅದರಂತೆ ಆರೋಪಿಗಳ ನ್ಯಾಯಾಂಗ ಬಂಧನ ಮುಂದುವರಿದಿದೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ವಾದಿಸಿರುತ್ತಾರೆ.
Next Story