ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಮಂಗಳೂರು: ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಮಂಜನಾಡಿ ಗ್ರಾಮದ ಕಲ್ಕಟ್ಟ ನಿವಾಸಿ ಅಬ್ದುಲ್ ಫಯಾನ್ (27) ಎಂಬಾತನನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.
ಫಯಾನ್ ವಿರುದ್ಧ ಕೊಣಾಜೆ, ಉಳ್ಳಾಲ, ಬರ್ಕೆ, ಉಪ್ಪಿನಂಗಡಿ, ಪುತ್ತೂರು ನಗರ ಠಾಣೆ ಹಾಗೂ ಬಂಟ್ವಾಳ ನಗರ ಪೊಲೀಸ್ ಠಾಣೆಗಳಲ್ಲಿ ಒಟ್ಟು 24 ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ಈತ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಈತನ ವಿರುದ್ಧ ನ್ಯಾಯಾಲಯವು ವಾರೆಂಟ್ ಹೊರಡಿಸಿತ್ತು. ಕೊಣಾಜೆ ಪೊಲೀಸ್ ಠಾಣಾ ಪ್ರಕರಣದಲ್ಲಿ ಈತನು ಸುಮಾರು 1 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಅ.13 ರಂದು ಕೊಣಾಜೆ ಠಾಣಾ ಪೊಲೀಸ್ ನಿರೀಕ್ಷಕರಾದ ರಾಜೇಂದ್ರ ಬಿ, ಪೊಲೀಸ್ ಉಪ ನಿರೀಕ್ಷಕರಾದ ನಾಗರಾಜ್ ಎಸ್, ಸಿಬ್ಬಂದಿ ಎಚ್.ಸಿ ಮಹಮ್ಮದ್ ಶರೀಫ್, ಪಿಸಿ ಸಂತೋಷ್ ಕೇರಳದ ಮಂಜೇಶ್ವರ ಎಂಬಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು , ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.