ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಮಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಂಗಳೂರು ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರ /ಸ್ನಾತಕೋತ್ತರ ಪದವೀಧರರಿಗೆ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿ ರುವ ಹಾಗೂ ಕಂಪ್ಯೂಟರ್ ಜ್ಞ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಮೆರಿಟ್ ಹಾಗೂ ಲಿಖಿತ ಪರೀಕ್ಷೆ ಆಧಾರದಲ್ಲಿ ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ತರಬೇತಿ ಅವಧಿಯಲ್ಲಿ ತಿಂಗಳಿಗೆ 15 ಸಾವಿರ ರೂ. ತರಬೇತಿ ಭತ್ತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನವಾಗಿದೆ.
ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, 2ನೇ ಮಹಡಿ, ಪಿಡಬ್ಲ್ಯೂಡಿ ಕಟ್ಟಡ, ನೆಹರು ಮೈದಾನದ ಎದುರು, ಮಂಗಳೂರು (ಮೊ.ಸಂ: 9886068357) ಈ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.