ಮೈಸೂರು ವಿಭಾಗ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಮಾಣಿ ಬಾಲವಿಕಾಸ ಶಾಲೆಯ ವಿದ್ಯಾರ್ಥಿಗಳು ಆಯ್ಕೆ
ಬಂಟ್ವಾಳ: ಕರ್ನಾಟಕ ಸರಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಟಿಸಿಎಸ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ದ.ಕ. ಇವರ ಸಹಯೋಗದೊಂದಿಗೆ ಮಂಗಳೂರಿನ ಕಪಿತಾನಿಯೊ ಪ್ರೌಢಶಾಲೆಯಲ್ಲಿ ನಡೆದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ಅಭಯ್ ಗೋವಿಂದ್ ಮತ್ತು 10ನೇ ತರಗತಿಯ ಪುನೀತ್ ಕೆ.ಜಿ. ಆಯ್ಕೆಯಾಗಿದ್ದಾರೆ,
ಇವರು ಮೈಸೂರು ವಿಭಾಗ ಮಟ್ಟದ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಲಾ ಪ್ರಕಟನೆ ತಿಳಿಸಿದೆ.
Next Story