ಮಂಗಳೂರು: ಹಲ್ಮಿಡಿ ಶಾಸನದ ಕಲ್ಲಿನ ಪ್ರತಿಕೃತಿ ಅನಾವರಣ
ಮಂಗಳೂರು: ಕನ್ನಡದ ಮೊಟ್ಟ ಮೊದಲ ಶಿಲಾ ಶಾಸನವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹಲ್ಮಿಡಿ ಶಾಸನದ ಮಹತ್ವ ವನ್ನು ಪ್ರಚುರಪಡಿಸುವ ಉದ್ದೇಶದಿಂದ ನಗರದ ಪುರಭವನದ ಮುಂಭಾಗದ ರಾಜಾಜಿ ಪಾರ್ಕ್ನಲ್ಲಿ ಪ್ರತಿಷ್ಠಾಪಿಸಲಾದ ಹಲ್ಮಿಡಿ ಶಾಸನದ ಕಲ್ಲಿನ ಪ್ರತಿಕೃತಿಯ ಅನಾವರಣ ಕಾರ್ಯಕ್ರಮವು ಶುಕ್ರವಾರ ನಡೆಯಿತು.
ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಮೇಯರ್ ಮನೋಜ್ ಕುಮಾರ್, ನಿಗಮ, ಮಂಡಳಿಗಳ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ಮಮತಾ ಗಟ್ಟಿ, ದ.ಕ.ಜಿಲ್ಲಾಕಾರಿ ಮುಲ್ಲೈ ಮುಗಿಲನ್, ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್, ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ. ಶ್ರೀನಾಥ್, ಮನಪಾ ವಿಪಕ್ಷ ನಾಯಕ ಪ್ರವೀಣ್ಚಂದ್ರ ಆಳ್ವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕ ರಾಜೇಶ್ ಉಪಸ್ಥಿತರಿದ್ದರು.
Next Story