ಯೋಧರೊಂದಿಗೆ ದೀಪಾವಳಿ ಆಚರಿಸಿಕೊಂಡ ಸಂಸದ ಬ್ರಿಜೇಶ್ ಚೌಟ
ಮಂಗಳೂರು, ನ.2: ದ.ಕ. ಸಂಸದ ಬ್ರಿಜೇಶ್ ಚೌಟ ಕರಾವಳಿ ಭದ್ರತಾ ಪಡೆಯ ಸೈನಿಕರೊಂದಿಗೆ ದೀಪಾವಳಿಯನ್ನು ಶುಕ್ರವಾರ ಆಚರಿಸಿದರು.
ಪಣಂಬೂರಿನಲ್ಲಿರುವ ಕರಾವಳಿ ಭದ್ರತಾ ಪಡೆಯ ಮಂಗಳೂರು ಘಟಕಕ್ಕೆ ಭೇಟಿ ನೀಡಿದ ಅವರು ಅಲ್ಲಿ ಯೋಧರೊಂದಿಗೆ ಸಿಹಿ ಹಂಚಿಕೊಂಡು, ಜವಾನರೊಂದಿಗೆ ಉಭಯ ಕುಶಲೋಪರಿ ನಡೆಸುವ ಮೂಲಕ ದೀಪಾವಳಿ ಆಚರಿಸಿಕೊಂಡರು.
ಬಳಿಕ ಮಾತನಾಡಿದ ಸಂಸದರು ತನ್ನ ಜೀವದ ಹಂಗನ್ನು ತೊರೆದು ದಿನದ 24 ಗಂಟೆಯೂ ದೇಶದ ರಕ್ಷಣೆಯಲ್ಲಿ ತೊಡಗಿ ರುವ ಯೋಧರೊಂದಿಗೆ ಕಾಲ ಕಳೆಯುವ ಮೂಲಕ ನನ್ನ ಸೇನಾ ದಿನಗಳನ್ನು ನೆನಪಿಸುವಂತಾಯಿತು ಎಂದರು.
ಈ ವೇಳೆ ಕರಾವಳಿ ಭದ್ರತಾ ಪಡೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story