ನಾದಸ್ವರದಲ್ಲಿ ರಾಷ್ಟ್ರೀಯ ಮಾನ್ಯತೆ ಪಡೆದವರು ನಾಗೇಶ್ ಬಪ್ಪನಾಡು: ಪ್ರದೀಪ ಕಲ್ಕೂರ
ಮಂಗಳೂರು: ‘ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಕಳೆದ ನಾಲ್ಕು ದಶಕಗಳಿಂದ ನಾದಸ್ವರವಾದಕ ರಾಗಿ ಸೇವೆ ಸಲ್ಲಿಸುತ್ತಾ, ಸಾಂಪ್ರದಾಯಿಕ ಶಾಸ್ತ್ರೀಯ ನಾದಸ್ವರ ಕ್ಷೇತ್ರದಲ್ಲಿ ಅನನ್ಯ ಸಾಧನೆಗೈದು ರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದವರು ನಾಗೇಶ್ ಬಪ್ಪನಾಡು’’ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಹೇಳಿದ್ದಾರೆ.
ನಾಗೇಶ್ ಬಪ್ಪನಾಡು ಅವರಿಗೆ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಅಭಿವಂದನಾ ಪುರಸ್ಕಾರ ನೀಡಿ ಗೌರವಿಸಿ ಅವರು ಮಾತನಾಡಿದರು. ಶಾರದಾ ವಿದ್ಯಾಲಯದಲ್ಲಿ ಕಲ್ಕೂರ ಪ್ರತಿಷ್ಠಾನದ ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಈ ಸಂದರ್ಭ ನಿಟ್ಟೆ ವಿವಿ ಪ್ರೊ ಚಾನ್ಸಲರ್ ಡಾ. ಶಾಂತಾರಾಮ ಶೆಟ್ಟಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ , ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್ , ಕರಾವಳಿ ಲೇಖಕಿ-ವಾಚಕಿಯರ ಸಂಘ ಅಧ್ಯಕ್ಷೆ ಶಕುಂತಳಾ ಶೆಟ್ಟಿ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್.ವಿ , ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿ ವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು , ಕಾಸರಗೋಡು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ ಉಪಸ್ಥಿತರಿದ್ದರು.