ಕೊರಗ ಸಮುದಾಯದಿಂದ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ
ಮಂಗಳೂರು: ನೈಜ ದುರ್ಬಲ ಬುಡಕಟ್ಟು ಗುಂಪುಗಳ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕೊರಗ ಸಮುದಾಯದವರಿಗೆ ಮನೆಗಳನ್ನು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಅನುಷ್ಠಾನಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಕೊರಗ ಸಮುದಾಯದದಿಂದ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಮಂಗಳೂರು, ಮೂಡುಬಿದಿರೆ, ಮೂಲ್ಕಿ ಹಾಗೂ ಉಳ್ಳಾಲ ತಾಲೂಕಿನ ಅಂಬ್ಲಮೊಗರು, ಬೆಳ್ಮ, ಬೋಳಿಯಾರು, ಹರೇಕಳ, ಕಿನ್ಯಾ, ಕೊಣಾಜೆ, ಮಂಜನಾಡಿ, ಮುನ್ನೂರು, ಪಾವೂರು, ತಲಪಾಡಿ ಗ್ರಾಪಂ ವ್ಯಾಪ್ತಿಯ ಕೊರಗ ಸಮುದಾಯದ ಫಲಾನು ಭವಿಗಳು ಅರ್ಜಿ ಸಲ್ಲಿಸಬಹುದು.
ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ವಾಣಿಜ್ಯ ಸಂಕೀರ್ಣ, ಮೊದಲನೇ ಮಹಡಿ ಕೋಡಿಯಾಲ್ ಬೈಲ್ ಮಂಗಳೂರು ತಾಲೂಕು ಇಲ್ಲಿಂದ ಪಡೆದು ಮಾಹಿತಿ ಯನ್ನು ಭರ್ತಿ ಮಾಡಿ ಸಂಪೂರ್ಣ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಪ್ರಕಟನೆ ತಿಳಿಸಿದೆ.
Next Story