ನಗರ/ಗ್ರಾಪಂ ಉಪ ಚುನಾವಣೆ: ಕಾರ್ಮಿಕರಿಗೆ ವೇತನ ಸಹಿತ ರಜೆ
ಮಂಗಳೂರು: ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಸೂಚನೆಯಂತೆ ನ.23ರಂದು ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆ ನಡೆಯಲಿದೆ.
ಈ ಚುನಾವಣೆ ನಡೆಯುವ ಆಯಾ ನಗರ ಸ್ಥಳೀಯ ಸಂಸ್ಥೆಗಳ/ಗ್ರಾಪಂಗಳ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ಕಚೇರಿಗಳು, ಶಾಲಾ ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಮತ್ತು ಸರಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.
ಎಲ್ಲಾ ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಥೆಗಳ ಮಾಲಕರು/ನಿಯೋಜಕರು ಅನುವು ಮಾಡಿಕೊಡಬೇಕು ಎಂದು ಮಂಗಳೂರು ಉಪವಿಭಾಗ ಕಾರ್ಮಿಕ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story