ಮೂತ್ರಪಿಂಡ ಶಸ್ತ್ರ ಚಿಕಿತ್ಸಾ ತಜ್ಞರ ಸಂಘ: ಮಂಗಳೂರು ಶಾಖೆಯ ಪದಾಧಿಕಾರಿಗಳ ಪದಗ್ರಹಣ
ಮಂಗಳೂರು: ಮೂತ್ರಪಿಂಡ ಶಸ್ತ್ರ ಚಿಕಿತ್ಸಾ ತಜ್ಞರ ಸಂಘದ ಮಂಗಳೂರು ಶಾಖೆಯ ನೂತನ ಪದಧಿಕಾರಿಗಳ ಪದಗ್ರಹಣ ಸಮಾರಂಭ ಗುರುವಾರ ನಗರದ ಕೆನರಾ ಕ್ಲಬ್ ಸಭಾಂಗಣದಲ್ಲಿ ನಡೆಯಿತು.
ಸಂಘದ ನಿರ್ಗಮನ ಅಧ್ಯಕ್ಷ ಡಾ.ಪ್ರಿತಮ್ ಶರ್ಮ ಸಮಾರಂಭದ ಅಧ್ಯಕ್ಷತೆ ಮಾತನಾಡಿ ತಮ್ಮ ಆಧಿಕಾರ ಅವಧಿಯಲ್ಲಿ ಸಹಕರಿಸಿದ ಸರ್ವ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿ ಸಾಂಕೇತಿಕವಾಗಿ ತಮ್ಮ ಅಧಿಕಾರವನ್ನು ಹಸ್ತಾಂತರಿಸಿದರು.
ನೂತನ ಅಧ್ಯಕ್ಷ ಡಾ. ನಂದಕಿಶೋರ್. ಬಿ ಅವರು ಸಾಲಿನಲ್ಲಿ ಸದಸ್ಯರ ಅನುಕೂಲಕ್ಕಾಗಿ ಹಲವಾರು ವಿವಿಧ ವೈದ್ಯಕೀಯ ಶಿಕ್ಷಣ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು ಅದನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸರ್ವ ಸದಸ್ಯರ ಸಹಕಾರ ವನ್ನು ಕೋರಿದರು. ನಿರ್ಗಮನ ಕಾರ್ಯದರ್ಶಿ ಡಾ. ಸನ್ಮಾನ್ ವಾರ್ಷಿಕ ವರದಿ ಮಂಡಿಸಿದರು.
ನಿರ್ಗಮನ ಕೋಶಾಧಿಕಾರಿ ಡಾ. ಪ್ರಶಾಂತ್ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು.
ವೇದಿಕೆಯಲ್ಲಿ ನೂತನ ಕೋಶಾಧಿಕಾರಿ ಡಾ. ರೋಶನ್ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಡಾ. ಶರತ್, ಡಾ. ಕಿಶನ್ರಾಜ್ ಉಪಸ್ಥಿತರಿದ್ದರು. ನೂತನ ಕಾರ್ಯದರ್ಶಿ ಡಾ. ಸುಯೋಗ್ ಶೆಟ್ಟಿ ವಂದಿಸಿದರು.