ದ.ಕ. ಜಿಪಂನಲ್ಲಿ ತರಬೇತಿ ಕಾರ್ಯಕ್ರಮ
ಮಂಗಳೂರು: ದ.ಕ.ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ಯಾನಲ್ ವಕೀಲರು, ಕಾನೂನು ನೆರವು ಅಭಿರಕ್ಷಕರು, ಅರೆಕಾಲಿಕಾ ಸ್ವಯಂ ಸೇವಕರು ಮತ್ತು ಸಮುದಾಯದವರಿಗೆ ತರಬೇತಿ ಕಾರ್ಯಕ್ರಮವು ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಬುಧವಾರ ನಡೆಯಿತು.
3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸಂಧ್ಯಾ ಎಸ್. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿ.ಜಿ. ಅಧ್ಯಕ್ಷತೆ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಮಹಿಳಾ ಅಭಿವೃದ್ಧಿ ನಿಗಮದ ನಿರಿಕ್ಷಕಿ ಚಂದ್ರಿಕಾ ಎಸ್. ನಾಯಕ್ ಲಿಂಗತ್ವ ಅಲ್ಪಸಂಖ್ಯಾತರಿಗಿರುವ ವಿವಿಧ ಸರಕಾರಿ ಸೌಲಭ್ಯಗಳ ಬಗ್ಗೆ ಮತ್ತು ಪ್ಯಾನಲ್ ವಕೀಲೆ ಗೌರಿ ಕೆ.ಎಸ್. ಲಿಂಗತ್ವ ಅಲ್ಪ ಸಂಖ್ಯಾತರಿಗಿರುವ ಕಾನೂನು ಮತ್ತು ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಮತ್ತಿತರರು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ ಕೆ.ಎಂ ವಂದಿಸಿದರು, ಶುಕರಾಜ್ ಎಸ್. ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು.