ಅಡ್ಡೂರಿನ ಸಹರಾ ಪಪೂ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ
ಮಂಗಳೂರು, ಡಿ.23: ಅಡ್ಡೂರಿನ ಸಹರಾ ಪದವಿಪೂರ್ವ ಕಾಲೇಜಿನ 2024-25ನೇ ಶೈಕ್ಷಣಿಕ ವರ್ಷದ ಕ್ರೀಡಾಕೂಟವು ಶನಿವಾರ ಕಾಲೇಜಿನ ಮೈದಾನದಲ್ಲಿ ನಡೆಯಿತು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಜಿಪಂ ಮಾಜಿ ಸದಸ್ಯ ಯು.ಪಿ.ಇಬ್ರಾಹಿಂ ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾಕೂಟಕ್ಕೆ ಮುಂಚೆ ವಿದ್ಯಾರ್ಥಿಗಳ ಪಥಸಂಚಲನ, ಕ್ರೀಡಾ ಪ್ರತಿಜ್ಞೆ ಸ್ವೀಕಾರ, ಕ್ರೀಡಾ ಜ್ಯೋತಿ ಬೆಳಗಿಸುವಿಕೆ ನಡೆಯಿತು. ಶಾಲಾ ಸಂಚಾಲಕ ಎ.ಕೆ. ಇಸ್ಮಾಯಿಲ್ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.
ಕಾಲೇಜು ಪ್ರಾಂಶುಪಾಲ ಕೇಶವ ಎಚ್. ಪ್ರಾಸ್ತಾವಿಕವಾಗಿ ಮಾತನಾಡಿದರು. ವೀಕ್ಷಿತಾ ಸ್ವಾಗತಿಸಿದರು. ಫೈವ್ ಸ್ಟಾರ್ ಬಾಯ್ಸ್ ಅಧ್ಯಕ್ಷ ಹಬೀಬ್, ಕಾರ್ಯದರ್ಶಿ ಎನ್. ಇಸ್ಮಾಯಿಲ್, ಕೋಶಾಧಿಕಾರಿ ಎ.ಕೆ.ಅಶ್ರಫ್, ಆಡಳಿತ ಮಂಡಳಿ ಸದಸ್ಯ ಎ.ಕೆ. ಮುಹಮ್ಮದ್, ಎ.ಜಿ. ಅಬ್ದುಲ್ ಖಾದರ್ ಮತ್ತಿತರರು ಉಪಸ್ಥಿತರಿದ್ದರು. ಮೋಹಿನಿ ಮತ್ತು ದೀಪ್ತಿ ಕಾರ್ಯಕ್ರಮ ನಿರೂಪಿಸಿದರು. ಅಂಕಿತಾ ವಂದಿಸಿದರು.
Next Story