ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನದ ಪ್ರಯುಕ್ತ ದ.ಕ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು
ಮಂಗಳೂರು: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮದಿನದ ಹಿನ್ನಲೆಯಲ್ಲಿ ಜನವರಿ ತಿಂಗಳಾದ್ಯಂತ ಎಐಡಿಎಸ್ಓ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ, ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಿದೆ.
"ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಹಾಗೂ ಐಎನ್ಎ ಪಾತ್ರ" ಈ ವಿಷಯದ ಕುರಿತು ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಸ್ವರಚಿತ ಕವನ, ಚಿತ್ರಕಲೆ, ರಸಪ್ರಶ್ನೆ ಹಾಗೂ ಗಾಯನ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಪ್ರೌಢಶಾಲೆ, ಪಿಯು ಹಾಗೂ ಪದವಿ/ ಇಂಜಿನಿಯರಿಂಗ್/ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಎಲ್ಲಾ ಸ್ಪರ್ಧೆಗಳು ನಡೆಯುತ್ತವೆ.
ಪ್ರತಿ ಸ್ಪರ್ಧೆಗೆ ಪ್ರತ್ಯೇಕವಾಗಿ ರೂ 10/- ಮೂರು ಸ್ಪರ್ಧೆಯಲ್ಲಿ ಭಾಗವಹಿಸುವಂತಿದ್ದರೆ ರೂ 20/- ಶುಲ್ಕ ಪಾವತಿಸಬೇಕಾಗುತ್ತದೆ.
ಈ ಸ್ಪರ್ಧೆಗಳಿಗೆ, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಲು - , ಜಿಲ್ಲಾ ಸಂಚಾಲಕ ವಿನಯ್ ಚಂದ್ರ (9035762866) ಅವರನ್ನು ಸಂಪರ್ಕಿಸುವಂತೆ ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story