ವೈದ್ಯಕೀಯ ನಿರ್ಲಕ್ಷ್ಯದಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ
ಮಂಗಳೂರು: ನಗರದ ಬಿಜೈ ಬಳಿ ಡಿ.21ರಂದು ರಸ್ತೆ ದಾಟುವ ವೇಳೆ ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡು ಕದ್ರಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಪಂಜಿಮೊಗರಿನ ಹಾಮದ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇದಕ್ಕೆ ಆಸ್ಪತ್ತೆಯ ನಿರ್ಲಕ್ಷ್ಯವೇ ಕಾರಣವಾಗಿದೆ. ಹಾಗಾಗಿ ಹಾಮದ್‌ರ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಖಾಸಗಿ ಆಸ್ಪತ್ರೆ ಹಾಗೂ ತಪ್ಪಿತಸ್ಥ ವೈದ್ಯರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಡಿವೈಎಫ್‌ಐ ನಿಯೋಗ ಮನವಿ ಸಲ್ಲಿಸಿದೆ.
ಡಿವೈಎಫ್‌ಐ ದ.ಕ. ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ, ರಿಝ್ವಾನ್ ಹರೇಕಳ, ಸಂತ್ರಸ್ತರ ಕುಟುಂಬಸ್ಥರಾದ ಕಲಂದರ್, ರೆಹಮಾನ್, ಡಿವೈಎಫ್‌ಐ ಮುಖಂಡ ನೌಶದ್ ಬಾವು ನಿಯೋಗದಲ್ಲಿದ್ದರು.
Next Story