ಗಾಂಜಾ ಸೇವನೆ ಆರೋಪ: ಮೂವರ ಸೆರೆ

ಮಂಗಳೂರು, ಮಾ.21: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ನಂತೂರು ಜಂಕ್ಷನ್ ಬಳಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಲ್ಲಿ ಮೆಲ್ವಿನ್ ಮಾನ್ಸಿ ಮತ್ತು ಕದ್ರಿ ಕಂಬಳ ಬಳಿಕ ಮಾದಕ ವಸ್ತು ಸೇವನೆ ಮಾಡಿದ ಆರೋಪದಡಿ ಪ್ರತೀಶ್ ಎಂಬವರನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಅತ್ತಾವರ ಬಳಿಯ ಎಸ್.ಎಲ್.ಮಥಾಯಿಸ್ ಪಾಕ್ ಬಳಿ ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಆರೋಪದಡಿ ಕಣ್ಣೂರು ಜಿಲ್ಲೆಯ ತಲಶ್ಶೇರಿಯ ಸುಹಾಸ್ ಪಿ.ಸಿ. (21) ಎಂಬಾತನನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಮಾದಕ ದ್ರವ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story