ವಿಟ್ಲ| ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಮಾಣಿಲ ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸೆಗಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಮಾಣಿಲ ಗ್ರಾಮದಲ್ಲಿ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಮಾಣಿಲ ಬಿಜೆಪಿ ಮುಖಂಡನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದಲಿತ ದೌರ್ಜನ್ಯ ಹಾಗೂ ಪೋಕ್ಸೋ ಪ್ರಕರಣ ದಾಖಲಾಗಿದೆ.
16 ವರ್ಷದ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ, ಕೀಳು ಮಟ್ಟದ ಶಬ್ದಗಳನ್ನು ಬಳಸಿದ ಆರೋಪದಲ್ಲಿ ಮಾಣಿಲ ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ಮಾಹಿತಿ ಹೊರ ಬರುತ್ತಿದ್ದಂತೆ ಕೃತ್ಯ ಎಸಗಿದ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
Next Story