ಮಂಗಳೂರು: ದರಗಳ ಏರಿಕೆಗೆ ಸಿಪಿಎಂ ಖಂಡನೆ

ಮಂಗಳೂರು, ಎ.2: ರಾಜ್ಯದ ಜನರು ಯುಗಾದಿ ಹಬ್ಬದ ಮುನ್ನವೇ ಹಾಲಿನ ಬೆಲೆ, ವಿದ್ಯುತ್ ದರ ಮತ್ತು ಕಸ ಸಂಗ್ರಹಣೆ ದರ ಏರಿಕೆಯ್ ಕಹಿಗಳನ್ನು ಅನುಭವಿಸುತ್ತಿರುವಾಗಲೇ ರಾಜ್ಯದ ಕಾಂಗ್ರೆಸ್ ಸರಕಾರ ಡೀಸೆಲ್ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ಟೋಲ್ ದರಗಳನ್ನು ಏರಿಕೆ ಮಾಡಿರುವುದನ್ನು ಸಿಪಿಎಂ ದ.ಕ.ಜಿಲ್ಲಾ ಸಮಿತಿಯು ಖಂಡಿಸಿದೆ.
ಗ್ಯಾರಂಟಿ ಯೋಜನೆಗೆ ಹಣ ನೀಡುವ ನೆಪದಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರವು ಜನ ಸಾಮಾನ್ಯರ ಬದುಕಿ ಮೇಲೆ ಬೆಲೆ ಏರಿಕೆಯ ಗದಾ ಪ್ರಹಾರವನ್ನೇ ಹರಿಯಬಿಟ್ಟಿದೆ. ಶಾಸಕರ ಸಂಬಳ ಭತ್ತೆಗಳನ್ನು ಮುಲಾಜಿಲ್ಲದೆ ಹೆಚ್ಚಿಸಿಕೊಂಡ ಕಾಂಗ್ರೆಸ್, ಬಿಜೆಪಿ, ಜನತಾದಳದ ಶಾಸಕರು ಜನಸಾಮಾನ್ಯರ ಬದುಕಿಗೆ ಮಾತ್ರ ಯಾವುದೇ ರಿಯಾಯಿತಿ ನೀಡದಿರುವುದು ಖಂಡನೀಯವಾಗಿದೆ. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರವು ಡೀಸೆಲ್ ಹಾಗೂ ಟೋಲ್ ದರಗಳ ಏರಿಕೆಗಳನ್ನು ಕೂಡಲೇ ಕೈ ಬಿಡಬೇಕು ಎಂದು ಸಮಿತಿಯ ಕಾರ್ಯದರ್ಶಿ ಮಂಡಳಿಯ ಸದಸ್ಯ ಸುನೀಲ್ ಕುಮಾರ್ ಬಜಾಲ್ ಆಗ್ರಹಿಸಿದ್ದಾರೆ.
Next Story