ಆ.20ರಂದು ನಿಟ್ಟೆ ರಜತಮಹೋತ್ಸವ "ರಜತಾರುಷ್"
ಮಂಗಳೂರು, ಆ. 18: ನಿಟ್ಟೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಉದ್ಯಮಾಡಳಿತ (ಎಂಬಿಎ) ಸಂಸ್ಥೆಯ ರಜತ ಮಹೋತ್ಸವ ಹಾಗೂ ಮತ್ತು ಹಳೆ ವಿರ್ದ್ಯಾರ್ಥಿಗಳ ಮಿಲನ ‘ರಜತಾರುಷ್’ ಕಾರ್ಯಕ್ರಮ ಆ.20ರಂದು ಬೆಳಗ್ಗೆ 9.45ಕ್ಕೆ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ.ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ನಿಟ್ಟೆ ವಿ.ವಿ. ಉಪಕುಲಪತಿ, ಸಂಸ್ಥೆಯ ಸ್ಥಾಪಕ ನಿರ್ದೇಶಕ ಪ್ರೊ. ಡಾ. ಎಂ.ಎಸ್. ಮೂಡಿತ್ತಾಯ ಅವರು ಮಾಹಿತಿ ನೀಡಿ, ಹಳೆ ವಿದ್ಯಾರ್ಥಿಗಳಿಗಾಗಿ ಕ್ವಿಜ್, ಆಟ, ಕ್ಯಾಂಪಸ್ ಟೂರ್, ಸಂವಹನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಸಂಸ್ಥೆಯ ಹಿಂದಿನ ನಿರ್ದೇಶಕ ಪ್ರೊ. ಕೆ. ರಮೇಶ್ ಕಾರ್ಣಿಕ್, ಡಾ. ಶಂಕರನ್, ಪ್ರಸ್ತುತ ಸಂಸ್ಥೆಯ ನಿರ್ದೇಶಕ ಡಾ. ಗುರುರಾಜ್ ಎಚ್. ಕಿದಿಯೂರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶುಶ್ರುತ್ ತೆಂಡೂಲ್ಕರ್ ವಂದಿಸಲಿದ್ದಾರೆ ಎಂದರು.ಸಂಸ್ಥೆಯ ನಿರ್ದೇಶಕ ಡಾ. ಗುರುರಾಜ್ ಎಚ್. ಕಿದಿಯೂರು ಮಾತನಾಡಿ, ಅದೇ ದಿನ ಸಂಜೆ 4 ಗಂಟೆಗೆ ಕಲ್ಲಿಕೋಟೆಯ ಇಂಡಿಯನ್ ಇನ್ಸ್ಸ್ಟಿಟ್ಯೂಟ್ ಆ್ ಮ್ಯಾನೇಜ್ಮೆಂಟ್ನ ನಿರ್ದೇಶಕ ಡಾ. ದೇಬಶಿಸ್ ಚಟರ್ಜಿ ವಿಶೇಷ ಉಪನಾಸಗೈಯಲಿದ್ದಾರೆ. ನೆಸ್ಕಾಮ್ನ ಹಿಂದಿನ ಸಿಇಒ ಅಶೋಕ್ ಪಾಮಿಡಿಯು ಅತಿಥಿಗಳಾಗಿ ಭಾಗವಹಿಸಲಿದ್ದು, ನಿಟ್ಟೆ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ (ಆರೋಗ್ಯ ಮತ್ತು ಆಡಳಿತ) ಪ್ರೊ. ಡಾ. ಶಾಂತಾರಾಮ ಶೆಟ್ಟಿ, ನಿಟ್ಟೆ ವಿವಿಯ ಕುಲಸಚಿವ ಪ್ರೊ. ಡಾ. ಹರ್ಷ ಹಾಲಹಳ್ಳಿ, ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲುನ್ಕರ್ ಭಾಗವಹಿಸಲಿದ್ದಾರೆ. ನಿಟ್ಟೆ ವಿವಿಯ ಕುಲಾಧಿಪತಿ, ನಿಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎನ್. ವಿನಯ್ ಹೆಗ್ಡೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ರಜತ ಮಹೋತ್ಸವದಲ್ಲಿ ಸಮ್ಮಾನ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.