ನ.16: ಸಿಟಿ ಗೋಲ್ಡ್ ಆ್ಯಂಡ್ ಡೈಮಂಡ್‌ನ ಬೆಳ್ಳಿ ಹಬ್ಬದ ಲೋಗೋ ಬಿಡುಗಡೆ
ನ.16ರಿಂದ ಆ್ಯಂಟಿಕ್ ಫೆಸ್ಟ್
ಮಂಗಳೂರು, ನ.14: ಸಿಟಿ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇದರ 25ನೇ ವಾರ್ಷಿಕೋತ್ಸವದ ಪ್ರಯುಕ್ತ ನ.16ರಿಂದ 26ರವರೆಗೆ ನಗರದ ಕಂಕನಾಡಿಯಲ್ಲಿರುವ ಚಿನ್ನಾಭರಣ ಮಳಿಗೆಯಾದ ಸಿಟಿಗೋಲ್ಡ್ ಆ್ಯಂಡ್ ಡೈಮಂಡ್ಸ್‌ನಲ್ಲಿ ಆ್ಯಂಟಿಕ್ ಫೆಸ್ಟ್ ನಡೆಯಲಿದೆ.
ನ.16ರ ಸಂಜೆ 4ಕ್ಕೆ ಸಂಸ್ಥೆಯ ಬೆಳ್ಳಿಹಬ್ಬದ ಲೋಗೋ ಅನಾವರಣಗೊಳ್ಳಲಿದೆ. ಅಲ್ಲದೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಲಿದೆ.
ಆ್ಯಂಟಿಕ್ ಫೆಸ್ಟ್ ಕಾರ್ಯಕ್ರಮವನ್ನು ತುಳು ಚಿತ್ರ ನಟ ಹಾಗು ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಅತಿಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ರಾಮಯ್ಯ, ಉಳ್ಳಾಲ ಸೈಯದ್ ಮದನಿ ದರ್ಗಾ ಮತ್ತು ಕೇಂದ್ರ ಜುಮ್ಮಾ ಮಸೀದಿಯ ಅಧ್ಯಕ್ಷ ಬಿ.ಜಿ. ಹನೀಫ್ ಹಾಜಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಚಾರ್ಮಾಡಿ ಹಸನಬ್ಬ, ಮೀಫ್ ಸಂಸ್ಥೆಯ ಪರವಾಗಿ ಅಧ್ಯಕ್ಷ ಮೂಸಬ್ಬ ಬ್ಯಾರಿ ಹಾಗು ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿ ಪೊಸವಣಿಕೆ ಅವರನ್ನು ಸನ್ಮಾನಿಸಲಾಗುವುದು.
ಸಿಟಿ ಗೋಲ್ಡ್ ಸಂಸ್ಥೆಯ 25ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರಿಗೆ ಚಿನ್ನಾಭರಣ ಖರೀದಿಯ ಮೇಕಿಂಗ್ ಚಾರ್ಜ್ ಮೇಲೆ ಶೇ.55ರಷ್ಟು ಹಾಗೂ ವಜ್ರಾಭರಣ ಖರೀದಿಯ ವಜ್ರದ ಮೌಲ್ಯದ ಮೇಲೆ ಶೇ 30ರಷ್ಟು ವಿನಾಯಿತಿ ನೀಡಲಾಗುವುದು.
ಪ್ರತಿ ಖರೀದಿಯ ಗ್ರಾಹಕರಿಗೆ ಸ್ಕ್ರ್ಯಾಚ್ ಆ್ಯಂಡ್ ವಿನ್ ಕೂಪನ್ ವಿತರಿಸಲಾಗುವುದು. ವಿಜೇತರಿಗೆ ಚಿನ್ನದ ನಾಣ್ಯ ಹಾಗು ಇತರೆ ಉಡುಗೊರೆಗಳು ನೀಡಲಾಗುವುದು. ಮದುವೆ ಖರೀದಿಯಲ್ಲಿನ ಪ್ರತಿ ಗ್ರಾಹಕರಿಗೂ ಕೂಪನ್ ವಿತರಿಸಲಾಗುವುದು. ವಿಜೇತ 5 ಜೋಡಿ ನವ ದಂಪತಿಗೆ ಮಲೇಷ್ಯಾ ಪ್ರವಾಸ ಕೈಗೊಳ್ಳುವ ಅವಕಾಶ ದೊರೆಯಲಿದೆ.
ದೇಶ ವಿದೇಶಗಳಲ್ಲಿ ವೈವಿಧ್ಯಮಯ ರೀತಿಯಲ್ಲಿ ತಯಾರಿಸಲ್ಪಟ್ಟ ಆ್ಯಂಟಿಕ್ ಚಿನ್ನಾಭರಣಗಳ ಪ್ರದರ್ಶನ ಹಾಗು ಮಾರಾಟ ನಡೆಯಲಿದೆ ಎಂದು ಸಿಟಿ ಗೋಲ್ಡ್ ಸಂಸ್ಥೆಯು ಪ್ರಕಟನೆಯಲ್ಲಿ ತಿಳಿಸಿದೆ.