Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯಶಾಸ್ತ್ರ ಪಠ್ಯಕ್ರಮ ಕುರಿತು ಒಂದು...

ರಾಜ್ಯಶಾಸ್ತ್ರ ಪಠ್ಯಕ್ರಮ ಕುರಿತು ಒಂದು ದಿನದ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ23 Sept 2023 7:00 PM IST
share
ರಾಜ್ಯಶಾಸ್ತ್ರ ಪಠ್ಯಕ್ರಮ ಕುರಿತು ಒಂದು ದಿನದ ಕಾರ್ಯಾಗಾರ

ಮಂಗಳೂರು, ಸೆ. 23: ಸಮಾಜಶಾಸ್ತ್ರ, ಅರ್ಥಶಾಸ್ತ್ರ ಮತ್ತು ಸಂಬಂಧಿತ ವಿಷಯಗಳೊಂದಿಗೆ ರಾಜ್ಯಶಾಸ್ತ್ರದ ಕಲಿಕೆ ಅರ್ಥಪೂರ್ಣ. ರಾಜ್ಯಶಾಸ್ತ್ರ ತನ್ನ ಪ್ರಾಮುಖ್ಯತೆಯನ್ನು ಎಂದಿಗೂ ಕಳೆದುಕೊಳ್ಳುವುದಿಲ್ಲ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಯರಾಜ್ ಅಮೀನ್ ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಅಧ್ಯಾಪಕರ ಸಂಘ (ಎಂಯುಪಿಎಸ್ಟಿಎ), ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗ, ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಐಕ್ಯೂಎಸಿ ಮತ್ತು ರಾಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಸಭಾಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಬಿ.ಎ ಯ ಐದು ಮತ್ತು ಆರನೇ ಸೆಮಿಸ್ಟರ್‌ನ ಎನ್‌ಇಪಿ ಪಠ್ಯಕ್ರಮದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯಶಾಸ್ತ್ರ ಶಿಕ್ಷಕರು ಸಮಾಜದಲ್ಲಿನ ಬೆಳವಣಿಗೆಗಳಿಗೆ ಸೈದ್ಧಾಂತಿಕ ಕೋನವನ್ನು ನೀಡುವಂತಾಗಬೇಕು. ಅತಿಯಾದ ಪ್ರಾಮುಖ್ಯತೆ ಮತ್ತು ವಿಂಗಡಣೆ ಕಲಿಕೆಗೆ ಅಡ್ಡಿಯಾಗಿದ್ದರೂ, ಅಂತರ-ಶಿಸ್ತಿನ ವಿಧಾನವು ನಮಗೆ ಸಹಾಯ ಮಾಡುತ್ತದೆ ಎಂದರು.

ಮುಖ್ಯ ಅತಿಥಿ, ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ಪ್ರೊ.ಪಿ.ಎಲ್.ಧರ್ಮ ಮಾತನಾಡಿ, ಎನ್‌ಇಪಿ-2020 ನಮ್ಮ ಮೇಲೆ ಯಾವುದೇ ‘ಇಸಂ’ ಅನ್ನು ಹೇರುವುದಿಲ್ಲ, ಆದರೆ ನಮ್ಮನ್ನು ಯೋಚಿಸುವಂತೆ ಮಾಡುತ್ತದೆ. ಶಿಕ್ಷಕರು ಮತ್ತೆ ಕಲಿಯುವ ಮತ್ತು ತಮ್ಮನ್ನು ತಾವು ಉನ್ನತೀಕರಿಸಿಕೊಳ್ಳುವ ಅನಿವಾರ್ಯತೆಯಿದೆ. ‘‘ಒಬ್ಬ ಶಿಕ್ಷಕನು ಸೃಜನಾತ್ಮಕವಾಗಿರಬೇಕು ಮತ್ತು ವಿದ್ಯಾರ್ಥಿಗಳಲ್ಲಿ ವಿಷಯದ ಬಗ್ಗೆ ಆಸಕ್ತಿಯನ್ನುಂಟುಮಾಡುವಷ್ಟು ಉತ್ಸಾಹವಿರಬೇಕು. ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಎಂದಿಗೂ ಕಡೆಗಣಿಸಬೇಡಿ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲೆ ಡಾ.ಅನಸೂಯಾ ರೈ, ಶಿಕ್ಷಕರಾಗಿ ನಮ್ಮನ್ನು ನಾವು ನವೀಕರಿಸಿಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಮಂಗಳೂರು ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಜಯವಂತ ನಾಯಕ್ ಅವರು ರಾಜಕೀಯ ಆರ್ಥಿಕತೆ ಮತ್ತು ಭಾರತದಲ್ಲಿ ಹೊಸ ಕೃಷಿ ನೀತಿ 2000 ಕುರಿತು ಉಪನ್ಯಾಸ ನೀಡಿದರು. ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ರುಕ್ಮಯ ಎಂ, ರಘು ಮತ್ತು ಡಾ.ಆಶಾಲತಾ ಪಿ ಅವರು ‘ಕರ್ನಾಟಕ ಸರ್ಕಾರ ಮತ್ತು ರಾಜಕೀಯ’ಕುರಿತು ವಿಷಯ ಮಂಡಿಸಿದರು.

ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಅಧ್ಯಾಪಕರ ಸಂಘ (ಎಂಯುಪಿಎಸ್ಟಿಎ) ಅಧ್ಯಕ್ಷ ಪ್ರೊ.ಶಾನಿ ಕೆ.ಆರ್ ಸ್ವಾಗತಿಸಿ, ಪ್ರೊ.ಶಹಬರ್ ಪಾಷಾ ವಂದಿಸಿದರು. ರುಕ್ಮಯ್ಯ ಕಾರ್ಯಕ್ರಮ ನಿರೂಪಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ.ಲತಾ ಎ.ಪಂಡಿತ್, ಎಂಯುಪಿಎಸ್ಟಿಎ ಕಾರ್ಯದರ್ಶಿ ಡಾ.ಗಣೇಶ್ ಶೆಟ್ಟಿ, ಐಕ್ಯೂಎಸಿ ಸಂಯೋಜಕ ಡಾ.ಸಿದ್ದರಾಜು ಎಂ.ಎನ್ ಉಪಸ್ಥಿತರಿದ್ದರು.

ಪರಮಾಣು ಬಾಂಬ್...ಶಾಂತಿಯ ಅಸ್ತ್ರ!

9/11 ದಾಳಿಯಂತಹ ಘಟನೆಗಳು ಅಂತರಾಷ್ಟ್ರೀಯ ಸಂಬಂಧಗಳ ಮಹತ್ವದ ಬಗ್ಗೆ ಅರಿವು ಮೂಡಿಸಿವೆ ಎಂದು ಮಾಹೆಯ ಭೌಗೋಳಿಕ ರಾಜಕೀಯ ಮತ್ತು ಅಂತರ್‌ರಾಷ್ಟ್ರೀಯ ಸಂಬಂಧ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ. ರವೀಂದ್ರ ನಾಥನ್ ಪಿ. ಅಭಿಪ್ರಾಯಪಟ್ಟರು.

ಈಗ ಭದ್ರತೆ, ಆರ್ಥಿಕ ಅಭಿವೃದ್ಧಿ, ಮಾನವ ಹಕ್ಕು, ಆರೋಗ್ಯ, ವ್ಯಾಪಾರ, ವ್ಯಾಪಾರ ಮುಂತಾದ ಕ್ಷೇತ್ರಗಳಲ್ಲಿ ದೇಶಗಳ ನಡುವೆ ಸಹಕಾರ ಹೆಚ್ಚಿದೆ. ಪರಮಾಣು ಪರೀಕ್ಷೆಗಳು ಅಂತರಾಷ್ಟ್ರೀಯ ಸಂಬಂಧಗಳನ್ನು ಅಲ್ಲಾಡಿಸಿದರೂ, ಕ್ರಮೇಣ ಶಸ್ತ್ರಾಸ್ತ್ರ ಪೈಪೋಟಿಗೆ ಕಡಿವಾಣ ಹಾಕಿ ಶಾಂತಿಯ ಅಸ್ತ್ರವಾಗಿ ಮಾರ್ಪಟ್ಟಿವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X